ದೇವನಹಳ್ಳಿ: ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಅಪಾಯಕಾರಿ ರಾಸಾಯನಿಕ ಹಾಗೂ ತ್ಯಾಜ್ಯವನ್ನು ಕೆರೆ ಹಾಗೂ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿವೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ, ನೀರು ಕಲುಷಿತಗೊಳ್ಳುತ್ತಿವೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಎಚ್ಚರಿಕೆ ನೀಡಿದರು.

ತಾಲ್ಲೂಕಿನ ಬೀರಸಂದ್ರದಲ್ಲಿರುವ ಜಿಲ್ಲಾಧಿಕಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಖಾನೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಇದ್ದಲ್ಲಿ ತ್ಯಾಜ್ಯ ಹೊರಗೆ ಬಿಡುವ ಅಗತ್ಯ ಇಲ್ಲ. ಆದರೆ, ಹಲವು ಕಾರ್ಖಾನೆಗಳು ಇದನ್ನು ಪಾಲನೆ ಮಾಡುತ್ತಿಲ್ಲ ಎಂದರು.

ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಹಸಿರು ನ್ಯಾಯಪೀಠದ (ಎನ್ಜಿಟಿ) ಆದೇಶ ಪಾಲನೆ ಹಾಗೂ ಜವಳಿ ಪಾರ್ಕ್ ಕುರಿತು ಚರ್ಚಿಸಲು ಸಭೆ ಕರೆಯಲಾಗಿತ್ತು.

ಜವಳಿ ಪಾರ್ಕ್ನಲ್ಲಿ ಎರಡರಿಂದ ಮೂರು ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಶೌಚಾಲಯ, ಕೊಳಚೆ ನೀರು ನೇರವಾಗಿ ಕೆರೆ, ಕಾಲುವೆಗಳಿಗೆ ಸೇರುತ್ತಿವೆ. ಕಾರ್ಖಾನೆಗಳಲ್ಲಿ ಸರಿಯಾಗಿ ಘನತ್ಯಾಜ್ಯ ನಿರ್ವಹಣೆ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಗಾರ್ಮೆಂಟ್ಸ್ ಹಾಗೂ ಸಿದ್ದ ಉಡುಪು ತಯಾರಿಕಾ ಘಟಕಗಳಲ್ಲಿ ರಾಸಾಯನ ಮಿಶ್ರಿತ ಬಣ್ಣದ ನೀರು ಬಳಸಿ ಬಟ್ಟೆ ಸಿದ್ದಪಡಿಸುತ್ತಾರೆ. ನಂತರ ಆ ನೀರನ್ನು ಹೊರಗೆ ಬಿಡುತ್ತಿದ್ದಾರೆ. ಆ ನೀರನ್ನು ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಇದರ ಜೊತೆಗೆ ಒಳಚರಂಡಿ ವ್ಯವಸ್ಥೆ ಆಗಬೇಕಿದೆ ಎಂದರು.

ಕಾರ್ಖಾನೆ, ಕೈಗಾರಿಕೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ ಅಲ್ಲಿಯೇ ವಿಲೇವಾರಿ ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಹೊರಗೆ ಬಿಡಬಾರದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ ನೀಡಿದರು.

ಕೊಳಚೆ ನೀರು ಸಂಸ್ಕರಣಾ ಘಟಕ, ಘನತ್ಯಾಜ್ಯ ನಿರ್ವಹಣೆ, ಸಾಮಾನ್ಯ ಸಂಸ್ಕರಣಾ ಘಟಕ, ಪರಿಸರ ಸ್ಥಾವರ ಅಳವಡಿಸಿಕೊಳ್ಳದ ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಕಾರ್ಖಾನೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಅನಧಿಕೃತವಾಗಿ, ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಸುರಿದರೆ ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕ ರಮೇಶ್, ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.