ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ಆರೋಗ್ಯ ಕಾಳಜಿ; ಜನರಿಗೆ ಸಲಹೆ

Last Updated 4 ನವೆಂಬರ್ 2021, 6:29 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಒಂದು ಪ್ರದೇಶದ ಜನರ ಸರ್ವಾಂಗೀಣ ಅಭಿವೃದ್ಧಿಗೆ ಆರೋಗ್ಯ ಅತ್ಯಂತ ಅವಶ್ಯಕವಾಗಿದೆ. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಸೂಕ್ತ ಕಾಳಜಿವಹಿಸಬೇಕು. ಹಲವು ರೋಗಗಳನ್ನು ಪ್ರಾರಂಭದಲ್ಲಿಯೇ ಗುರುತಿಸಿದರೆ ಗುಣಪಡಿಸಬಹುದು’ ಎಂದು ಮಾಜಿ ಶಾಸಕ ಕೆ. ವೆಂಕಟಸ್ವಾಮಿ ಹೇಳಿದರು.

ತಾಲ್ಲೂಕಿನ ಅಣ್ಣೇಶ್ವರ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಬುಧವಾರ ಮಾನಸ ಆಸ್ಪತ್ರೆಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಮಾನವನಿಗೆ ಆಕಸ್ಮಿಕ ಸಂದರ್ಭಗಳಲ್ಲಿ ತುರ್ತಾಗಿ ಅಗತ್ಯವಾಗಿ ಬೇಕಾಗುವ ರಕ್ತವು ಅಮೂಲ್ಯ ಜೀವ ಉಳಿಸುತ್ತದೆ. ಇದನ್ನು ಅರಿತು ಸಮಾಜದ ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಮಾದರಿಯಾಗಬೇಕು. ರಕ್ತದಾನ ಮಾಡಿದರೆ ತಮ್ಮ ದೇಹದ ಕೊಬ್ಬಿನಾಂಶ ಕಡಿಮೆಯಾಗಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ಮಾತನಾಡಿ, ನಿರಂತರವಾಗಿ ಒತ್ತಡದಲ್ಲಿರುವವರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಗ್ರಾಮಾಂತರ ಪ್ರದೇಶದಲ್ಲಿ ಆಯೋಜನೆ ಮಾಡುವಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಮುಖ್ಯವಾಗಿ ಹೃದಯ ತಪಾಸಣೆ, ರಕ್ತದೊತ್ತಡ, ಮಧುಮೇಹದ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿ ದರು.

ಅಣ್ಣೇಶ್ವರ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರು, ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರ ಜೊತೆಗೆ ಯುವಕರು ರಕ್ತದಾನ ಮಾಡಿದರು.

ತಪ್ಪಾಗಿ ಅರ್ಥೈಸಿಕೊಂಡ ಬಿಜೆಪಿ:ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಪ್ರೀತಿ ಇದ್ದಿದ್ದರಿಂದಲೇ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ಮೊದಲು ಪರಿಶಿಷ್ಟರ ಸಾಲ ಮನ್ನಾ ಮಾಡಿದರು. ಅವರ ಅವಧಿಯಲ್ಲಿ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ 60ರಷ್ಟನ್ನು ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಮೀಸಲಿಟ್ಟಿದ್ದರು ಎಂದು ಮಾಜಿ ಶಾಸಕ ವೆಂಕಟಸ್ವಾಮಿ ಹೇಳಿದರು.

‘ಜನರಿಂದ ಆಯ್ಕೆಯಾಗಿರುವ ದಲಿತ ಜನಪ್ರತಿನಿಧಿಗಳು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆಂದು ಅವರು ಹೇಳಿದ್ದಾರೆ. ಇದನ್ನು ಬಿಜೆಪಿಯವರು ತಪ್ಪಾಗಿ ಅರ್ಥೈಸಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯಲು ಪ್ರಯತ್ನ ಮಾಡುತ್ತಿದ್ದಾರೆ. ದಲಿತರ ಪರವಾಗಿರುವವರು ಯಾರು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ’ ಎಂದು ಹೇಳಿದರು.

ವಿ. ರಾಮಚಂದ್ರಪ್ಪ, ಚಂದ್ರಶೇಖರ್, ಮುನಿರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT