ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ತಪಾಸಣಾ ಶಿಬಿರ

Published 23 ಮೇ 2023, 15:20 IST
Last Updated 23 ಮೇ 2023, 15:20 IST
ಅಕ್ಷರ ಗಾತ್ರ

ವಿಜಯಪುರ (ದೇವನಹಳ್ಳಿ): ಕಾರ್ಮಿಕರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಕಡೆಗೆ ಗಮನಹರಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಅವರು ತಿಳಿಸಿದರು.

ಹೋಬಳಿಯ ಬಿಜ್ಜವರ ಗ್ರಾಮದಲ್ಲಿ ಆರೋಗ್ಯ ಇಲಾಖೆ, ಎಂ.ಎಸ್. ರಾಮಯ್ಯ ಆಸ್ಪತ್ರೆ ಹಾಗೂ ಕರ್ನಾಟಕ ಆರೋಗ್ಯ ಅಭ್ಯುದಯ ಸಂಸ್ಥೆಯ ಸಹಯೋಗದಲ್ಲಿ ಆಯೋಜನೆಗೊಂಡಿದ್ದ ಮಹಾತ್ಮಗಾಂಧಿ ನರೇಗಾ ಯೋಜನೆಯ ಕೂಲಿಕಾರರ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. 

ಶ್ರಮಿಕರು ಯಾವುದೇ ವಿಧವಾದ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ನಿರ್ಲಕ್ಷ್ಯ ಮಾಡದೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೋಗಿ ತಪಾಸಣೆ ನಡೆಸಿ, ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಮಾತನಾಡಿ, ಬೇಸಿಗೆಯ ಕಾಲವಾಗಿರುವ ಕಾರಣ, ಕಾರ್ಮಿಕರ ಆರೋಗ್ಯದ ಮೇಲೆ ತೀವ್ರ ನಿಗಾವಹಿಸಬೇಕಾಗಿದೆ. ಕೂಲಿಕಾರ್ಮಿಕರು ತೆಗೆದುಕೊಳ್ಳುವ ಊಟ, ಅವರ ಜೀವನ ಶೈಲಿಯೂ ಕೂಡಾ ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಜೊತೆಗೆ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿವೆ ಎಂದರು.

ಕಾರ್ಮಿಕರು ದುಶ್ಚಟಗಳಿಂದ ದೂರವಿದ್ದು, ಆರೋಗ್ಯ ಕಾಪಾಡಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ 54 ಮಂದಿ ನರೇಗಾ ಕೂಲಿಕಾರರು ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿಜ್ಜವರ ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯರಾದ ರಾಮಸ್ವಾಮಿ, ಭಾಗ್ಯಮ್ಮ, ಆರತಿ. ತಾಲ್ಲೂಕು ಐಇಸಿ ಸಂಯೋಜಕ ಪ್ರಕಾಶ್. ಸಿ.ಎಂ., ಆರೋಗ್ಯ ಇಲಾಖೆಯ ಶ್ವೇತಾ. ಜಿಲ್ಲಾ ಸಂಯೋಜಕ ತಯಾಬ್, ಎಂ.ಎಸ್.ರಾಮಯ್ಯ ಆಸ್ಪತ್ರೆಯ ವೈದ್ಯರು. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT