ಶನಿವಾರ, ಸೆಪ್ಟೆಂಬರ್ 25, 2021
24 °C

ಆರೋಗ್ಯ ತಪಸಣೆ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ಶ್ರೀ ಸತ್ಯ ಸಾಯಿ ಸೇವಾಕೇಂದ್ರ ಹಾಗೂ ಸೌಖ್ಯ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಹೊಸಕೋಟೆಯ ಶ್ರೀ ವಿವೇಕಾನಂದ ವಿದ್ಯಾಕೇಂದ್ರ ಶಾಲೆಯಲ್ಲಿ ಉಚಿತ ಆಯುರ್ವೇದ ಮತ್ತು ಹೋಮಿಯೋಪಥಿ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿ ತಿಂಗಳ ಮೊದಲನೆಯ ಶನಿವಾರ ನಡೆಯುವ ಈ ಶಿಬಿರದಲ್ಲಿ ಸಮಾಲೋಚನೆ ಮಾಡಿ ಔಷಧಿ ನೀಡಲಾಗುತ್ತಿದೆ. ರೋಗ ಪರಿಶೀಲನೆ, ಶ್ವಾಸಕೋಶದ ಕಾರ್ಯ ಪರಿಶೀಲನೆ ಮತ್ತು ಮಹಿಳೆಯರ ಆರೋಗ್ಯಕ್ಕೆ ಚಿಕಿತ್ಸೆ ನೀಡಲಾಗುವುದು. ಶಿಬಿರದಲ್ಲಿ ಹೊಸಕೋಟೆ ನಗರ ಹಾಗೂ ಸುತ್ತಲಿನ ಜನರು ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತಷ್ಟು ಜನರು ಸದುಪಯೋಗ ಪಡೆದುಕೊಂಡರೆ ಶಿಬಿರ ಯಶಸ್ವಿಯಾಗುತ್ತದೆ ಎಂದು ಸತ್ಯಸಾಯಿ ಸೇವಾ ಕೇಂದ್ರದ ಸಂಯೋಜಕರಾದ ರಾಜಗೋಪಾಲ್ ಹಾಗೂ ಧರ್ಮೆಂದ್ರ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.