ಶುಕ್ರವಾರ, ನವೆಂಬರ್ 22, 2019
20 °C

‘ಆರೋಗ್ಯ ಕ್ಷೇತ್ರ ದುಬಾರಿ’

Published:
Updated:
Prajavani

ದೊಡ್ಡಬಳ್ಳಾಪುರ: ದೇಹಕ್ಕೆ ಪ್ರಧಾನವಾದ ಕಣ್ಣಿನ ಬಗ್ಗೆ ಜಾಗ್ರತೆ ವಹಿಸುವುದು ಬಹು ಮುಖ್ಯ. ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಂಡಿರುವ ಲಯನ್ಸ್ ಕ್ಲಬ್ ಸೇವೆ ಶ್ಲಾಘನೀಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಬಿ.ಕುಲಕರ್ಣಿ ಹೇಳಿದರು.

ನಗರದ ಲಯನ್ಸ್ ಕ್ಲಬ್ ಭವನದಲ್ಲಿ ನಡೆದ ಉಚಿತ ಶಸ್ತ್ರಚಿಕಿತ್ಸೆ ಮತ್ತು ಕಣ್ಣಿನ ಪರೀಕ್ಷೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯ ದುಬಾರಿಯಾಗುತ್ತಿರುವ ಇಂದಿನ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಬಡವರ ಪಾಲಿಗೆ ವರದಾನವಾಗಿದೆ. ಲಯನ್ಸ್ ಕ್ಲಬ್ ಸೇವಾ ಕಾರ್ಯ ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದರು.

ಶಿಬಿರವನ್ನು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಶ್ಯಾಮಲಾ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಡಾ.ರಾಜೇಶ್ ಎಲ್.ಪತಿ ಕುಟುಂಬದವರು ಪ್ರಾಯೋಜಿಸಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಮೋಹನ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೀಪ್‍ ಎ.ನಾಯಿಕ, ಲಯನ್ಸ್ ಕ್ಲಬ್ ಕಾಯದರ್ಶಿ ಕೆ.ಶಿವಶಂಕರ್, ಖಜಾಂಚಿ ಕೆ.ಜಿ.ಗೋಪಾಲ್, ಸಹ ಕಾಯದರ್ಶಿ ಪುಷ್ಪಾಶಿವಶಂಕರ್, ಲಯನ್ಸ್ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಎಲ್.ಕೃಷ್ಣಮೂರ್ತಿ, ಲಯನ್ ಪುಟ್ಟರುದ್ರಪ್ಪ ಇದ್ದರು.

 

ಪ್ರತಿಕ್ರಿಯಿಸಿ (+)