ಬೇಸಿಗೆಯಲ್ಲಿ ಅಧಿಕಾರಿಗಳ ಹೈರಾಣ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಕುಡಿಯುವ ನೀರು ಪೂರೈಕೆ ಜತೆಗೆ ಮೋಟಾರು ರಿಪೇರಿಗೆ ಹಣ ಹೊಂದಿಸುವ ಸಂಕಷ್ಟ

ಬೇಸಿಗೆಯಲ್ಲಿ ಅಧಿಕಾರಿಗಳ ಹೈರಾಣ

Published:
Updated:
Prajavani

ವಿಜಯಪುರ: ಬೇಸಿಗೆಯಲ್ಲಿ ಬಸವಳಿದಿರುವ ಜನರಿಗೆ ಕುಡಿಯಲು ನೀರು ಪೂರೈಕೆ ಸವಾಲಾಗಿ ಪರಿಣಮಿಸಿರುವುದು ಒಂದು ಕಡೆಯಾದರೆ, ಕೊಳವೆ ಬಾವಿಗಳಲ್ಲಿ ಪದೇ ಪದೇ ಸುಟ್ಟು ಹೋಗುವ ಪಂಪು, ಮೋಟಾರು ರಿಪೇರಿಗಾಗಿ ಹಣ ಹೊಂದಿಸುವುದು ಪಂಚಾಯಿತಿ ಅಧಿಕಾರಿಗಳಿಗೆ ಮತ್ತೊಂದು ಸವಾಲಿನ ಕೆಲಸವಾಗಿ ಪರಿಣಮಿಸಿದೆ.

ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಸರ್ಕಾರ ಸ್ಥಳೀಯ ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆಗಳಿಗೆ ಯಾವುದೇ ನಿಬಂಧನೆ ವಿಧಿಸದೆ ಅನುದಾನ ಬಳಕೆಗೆ ಅವಕಾಶ ನೀಡಿದೆ. ಆದರೆ, ನೀರು ಪೂರೈಕೆ ಮಾಡಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

ಗ್ರಾಮ ಪಂಚಾಯಿತಿ, ಪುರಸಭೆ ವ್ಯಾಪ್ತಿಯಲ್ಲಿ ತಿಂಗಳಲ್ಲಿ ಕನಿಷ್ಠ 4 ರಿಂದ 5 ಬಾರಿ ಕೊಳವೆಬಾವಿ ಮೋಟಾರ್‌ಗಳು ಸುಟ್ಟು ಹೋಗುತ್ತಿವೆ. ಒಂದು ಕೊಳವೆ ಬಾವಿಯಿಂದ ಪಂಪು, ಮೋಟಾರು ಹೊರತೆಗೆಯಬೇಕಾದರೆ ಅಡಿಗಳ ಲೆಕ್ಕದಲ್ಲಿ 1000 ಅಡಿಗೆ ಕನಿಷ್ಠ ₹5 ಸಾವಿರ ಖರ್ಚು ಮಾಡಬೇಕಾಗಿದೆ. ಪಂಪು, ಮೋಟಾರು ರಿಪೇರಿಗೆ ₹20 ಸಾವಿರದವರೆಗೂ ವ್ಯಯವಾಗುತ್ತದೆ. ಕೆಲ ಗ್ರಾಮ ಪಂಚಾಯಿತಿಗಳಲ್ಲಿ ವಾರ್ಷಿಕ ಟೆಂಡರ್ ಕರೆದು ಕೊಡಲಾಗುತ್ತದೆ. ಗುತ್ತಿಗೆದಾರರೇ ಅದರ ಹೊಣೆ ಹೊತ್ತು ರಿಪೇರಿ ಮಾಡಿಸಬೇಕು. ಕೆಲವೊಮ್ಮೆ ಕೇಬಲ್ ಸುಟ್ಟುಹೋಗಿದ್ದರೆ ಬೇರೆ ಕೇಬಲ್ ಅಳವಡಿಸಬೇಕು. ಬಿಡಿಭಾಗಗಳು ಹೋಗಿದ್ದರೂ ಅವರೇ ಅದರ ವೆಚ್ಚ ಭರಿಸಬೇಕು. ಇದಕ್ಕೆ ವಾರ್ಷಿಕವಾಗಿ ಪಂಚಾಯಿತಿಗಳಲ್ಲಿ ₹3ಲಕ್ಷದವರೆಗೂ ಟೆಂಡರ್ ಕೊಡಲಾಗುತ್ತದೆ. ಹೆಚ್ಚು ಹಳ್ಳಿಗಳಿರುವ ಪಂಚಾಯಿತಿಗಳಲ್ಲಿ ₹5 ಲಕ್ಷದವರೆಗೂ ಟೆಂಡರ್ ಕೊಡಲಾಗುತ್ತದೆ.

ಬೇಸಿಗೆಯಲ್ಲಿ ಕೊಳವೆ ಬಾವಿಗಳು ವಿಫಲವಾದಾಗ ಸಮೀಪದ ರೈತರಿಂದ ನೀರು ಖರೀದಿಸಿ ಪೂರೈಕೆ ಮಾಡಬೇಕು. ನೀರು ಕಡಿಮೆ ಇರುವ ಕಾರಣ ರೈತರು ಹಿಂದೇಟು ಹಾಕುತ್ತಿದ್ದಾರೆ. ಈ ವಿಷಯ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಬಿಗಾಡಾಯಿಸುತ್ತಿದೆ. ಎಷ್ಟೇ ಕೊಳವೆ ಬಾವಿಗಳು ಕೊರೆದರೂ ಅಂತರ್ಜಲದ ಮಟ್ಟ ಕುಸಿದಿರುವ ಕಾರಣ ನೀರು ಸಿಗುವುದು ಖಾತ್ರಿ ಇಲ್ಲ. ಟ್ಯಾಂಕರ್‌ಗಳ ಮೂಲಕ ತಾಲ್ಲೂಕಿನ 25 ಹಳ್ಳಿಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಪ್ರತಿ ವರ್ಷ ಬೇಸಿಗೆ ಎದುರಿಸುವುದು  ಕಷ್ಟವಾಗಿದೆ ಎನ್ನುತ್ತಾರೆ ಜಿಲ್ಲಾ ಪಂಚಾಯಿತಿ ಕುಡಿಯುವ ನೀರಿನ ವಿಭಾಗದ ಎಇಇ ಸೋಮಶೇಖರ್.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !