ಅತ್ತಿಬೆಲೆ(ಆನೇಕಲ್): ತಾಲ್ಲೂಕಿನ ಅತ್ತಿಬೆಲೆಯ ಶಾರದ ಇಂಟರ್ನ್ಯಾಷನಲ್ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿ ಮಾಡಲಾಯಿತು.

ಹೆಲಿಕಾಪ್ಟರ್ ಆಗಮಿಸುತ್ತಿದ್ದಂತೆ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಭ್ರಮ ಮುಗಿಲುಮುಟ್ಟಿತ್ತು. ಗುಲಾಬಿ ಸೇರಿದಂತೆ ವಿವಿಧ ಬಗೆಯ ಹೂವುಗಳನ್ನು ಹೆಲಿಕಾಪ್ಟರ್ನಿಂದ ಸುರಿಯುವ ಮೂಲಕ ಗೌರವ ಸಲ್ಲಿಸಲಾಯಿತು. ಪುಟಾಣಿ ಮಕ್ಕಳನ್ನು ಪೋಷಕರು ತಮ್ಮ ಮೇಲೆ ಕೂರಿಸಿಕೊಂಡು ಹೆಲಿಕಾಪ್ಟರ್ನ್ನು ತೋರಿಸಿ ಖುಷಿಪಟ್ಟರು.

ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ವಿನೂತನ ರೀತಿಯಲ್ಲಿ ಗೌರವ ಸೂಚಿಸಬೇಕು ಎಂಬ ಕಾರಣಕ್ಕಾಗಿ ಹೆಲಿಕಾಪ್ಟರ್ನಲ್ಲಿ ಪುಷ್ಪವೃಷ್ಟಿ ಮಾಡಿಸಲಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಶಾಲೆಯೊಂದರಲ್ಲಿ ವಿನೂತನವಾಗಿ ವಿದ್ಯಾರ್ಥಿಗಳಿಗೆ ಗೌರವ ಸೂಚಿಸಲಾಗಿದೆ. ಶಾಲೆ ಅಭಿವೃದ್ಧಿಯಲ್ಲಿ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕರ ಮತ್ತು ಭೋದಕೇತರ ಸಿಬ್ಬಂದಿಯ ಪಾತ್ರ ಪ್ರಮುಖವಾದುದ್ದು. ಅವರಿಗೆ ಗೌರವ ಸೂಚಿಸಲು ಹೆಲಿಕಾಪ್ಟರ್ನಿಂದ ಪುಷ್ಪವೃಷ್ಟಿ ಮಾಡಲಾಗಿದೆ ಎಂದು ಶಾರದ ಇಂಟರ್ನ್ಯಾಷನಲ್ ಶಾಲೆಯ ಮುಖ್ಯಸ್ಥ ಯೋಗೇಶ್ ತಿಳಿಸಿದರು.

ಚಿತ್ರನಟ ಶರಣ್ ವಾರ್ಷಿಕೋತ್ಸವದ ಮುಖ್ಯ ಆಕರ್ಷಣೆಯಾಗಿದ್ದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.