’ಉತ್ತಮ ಆಡಳಿತ ನೀಡಲು ಸಹಕರಿಸಿ‘

ಬುಧವಾರ, ಜೂನ್ 19, 2019
23 °C

’ಉತ್ತಮ ಆಡಳಿತ ನೀಡಲು ಸಹಕರಿಸಿ‘

Published:
Updated:
Prajavani

ದೇವನಹಳ್ಳಿ: ‘ಬಮೂಲ್‌ಗೆ ಮುಂದಿನ ಐದು ವರ್ಷಗಳಲ್ಲಿ ಉತ್ತಮ ಆಡಳಿತ ನೀಡಲು ಎಲ್ಲ ಸಹಕಾರ ಸಂಘಗಳ ಪದಾಧಿಕಾರಿಗಳು ಸಹಕರಿಸಬೇಕು’ ಎಂದು ತಾಲ್ಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಮಂಡಿಬೆಲೆ ರಾಜಣ್ಣ ಕೋರಿದರು.

ಇಲ್ಲಿನ ಹಾಲು ಉತ್ಪಾದಕರ ಆಡಳಿತ ಉಪ ಶಿಬಿರ ಕಚೇರಿ ಸಭಾಂಗಣದಲ್ಲಿ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಆಡಳಿತ ಮಂಡಳಿ 2019ರ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ನಿರ್ದೇಶಕರಾಗಿ ಚುನಾಯಿತರಾದ ಬಿ.ಶ್ರೀನಿವಾಸ್‌ ಅವರಿಗೆ ತಾಲ್ಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಜನಬಲ ಇರುವವರೆಗೆ ಗೆಲುವಿನ ನಾಗಾಲೋಟ ನಿಲ್ಲವುದಿಲ್ಲ. ಬಮೂಲ್ ಒಕ್ಕೂಟ ವ್ಯವಸ್ಥೆಯಲ್ಲಿಯೇ ಅತ್ಯಂತ ಉತ್ತಮವಾಗಿ ಸಂಘಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹೈನು ಉದ್ಯಮದ ಪ್ರಗತಿ ಹೆಚ್ಚಿಸಬೇಕು. ಬಮೂಲ್ ಒಕ್ಕೂಟದ ಶಾಖೆಯನ್ನು ಆರಂಬಿಸಿ ವಿವಿಧ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಬೇಕು. ಪಶು ಆಹಾರ ಘಟಕವನ್ನು ತಾಲ್ಲೂಕು ಕೇಂದ್ರದಲ್ಲಿ ಆರಂಭಿಸಬೇಕು’ ಎಂದು ಮನವಿ ಮಾಡಿದರು.

ಶಿಬಿರ ಕಚೇರಿ ಉಪವ್ಯವಸ್ಥಾಪಕ ಡಾ.ಗಂಗಯ್ಯ ಮಾತನಾಡಿ, ‘182 ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ. ಹೊಸ ಪದಾಧಿಕಾರಿಗಳು ಪಶು ಆಹಾರ ಪೂರೈಕೆ ಕಡಿಮೆ ಆಗದಂತೆ ಎಚ್ಚರಿಕೆ ವಹಿಸಬೇಕು. ಈಗಾಗಲೇ 12 ಸಾವಿರ ಪಶುಗಳಿಗೆ ಮ್ಯಾಟ್ ವಿತರಿಸಲಾಗಿದೆ. ಪಶುಗಳ ರೋಗ ಪತ್ತೆ ಹಚ್ಚುವ ಕೇಂದ್ರ ಆರಂಭಗೊಂಡಿದೆ’ ಎಂದರು.

ಬಮೂಲ್ ನಿರ್ದೇಶಕ ಬಿ.ಶ್ರೀನಿವಾಸ್‌ ಮಾತನಾಡಿ, ‘ಹಾಲು ಉತ್ಪಾದಕ ರೈತರ ಹಿತ ಕಾಪಾಡುವುದು ನನ್ನ ಮೊದಲ ಕರ್ತವ್ಯ. ತಾಲ್ಲೂಕಿನಲ್ಲಿರುವ ಪ್ರತಿಯೊಂದು ಸಹಕಾರ ಸಂಘಗಳು ಪ್ರಗತಿಯಾಗಬೇಕು. ಇಡೀ ರಾಜ್ಯದಲ್ಲಿ ಹಾಲು ಉತ್ಪಾದಕರಿಗೆ ನೇರವಾಗಿ ಅವರ ಖಾತೆಗೆ ಹಣ ತಲುಪುವ ವ್ಯವಸ್ಥೆಯಾಗಿದ್ದು ದೇವನಹಳ್ಳಿ ತಾಲ್ಲೂಕಿನಲ್ಲಿ ಮಾತ್ರ. ಸಹಕರಿಸಿದ ಸಿಬ್ಬಂದಿಗೆ ಅಭಿನಂದನೆ. ಪಶು ಆಹಾರ ಘಟಕ ಆರಂಭಕ್ಕೆ ಚಿಂತನೆ ಇದೆ’ ಎಂದು ಹೇಳಿದರು.

ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕ ಅಧ್ಯಕ್ಷ ಬಿ.ಎನ್.ಲೋಕೇಶ್, ತಾಲ್ಲೂಕು ಘಟಕ ಅಧ್ಯಕ್ಷ ಚೆನ್ನಕೇಶವ, ಸಂಘಟನಾ ಕಾರ್ಯದರ್ಶಿಗಳಾದ ಬಿ.ರಾಜಣ್ಣ, ವಿಜಯಕುಮಾರ್, ಉಪವ್ಯವಸ್ಥಾಪಕ ಡಾ.ನಾಗರಾಜ್, ಸಹಾಯಕ ವ್ಯವಸ್ಥಾಪಕರಾದ ಬಿ.ವೆಂಕಟೇಶ್, ಮುನಿರಾಜುಗೌಡ , ವಿಸ್ತರಣಾಧಿಕಾರಿಗಳಾದ ಮುನಿರಾಜು, ನಾರಾಯಣಸ್ವಾಮಿ, ರಾಜೇಶ್, ಡಿ.ಕೆ.ಮುನಿರಾಜು, ಅನಿಲ್ ಕುಮಾರ್ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !