ಬುಧವಾರ, ಜನವರಿ 22, 2020
22 °C

 ಸಂತ್ರಸ್ತ ಮಹಿಳೆಯರಿಗೆ ನೆರವಾಗಿ: ಡಿ.ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಸಂಕಷ್ಟ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ನೆರವಾಗುವ ದೃಷ್ಟಿಯಿಂದ ಕೇಂದ್ರ ಸರ್ಕಾರ ‘ಸ್ವಾಧಾರ ಗೃಹ’ ಯೋಜನೆ ರೂಪಿಸಿದೆ. ಸೇವಾ ಮನೋಭಾವದಿಂದ ಯಾವುದೇ ಬೇಧ ಭಾವ ಇಲ್ಲದೆ ನೆರವಾಗಬೇಕಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.‌

ಜಿಲ್ಲೆಯ ಸ್ವಯಂಸೇವಾ ಸಂಸ್ಥೆಗಳ ಮೂಲಕ ಸ್ವಧಾರ ಗೃಹ ನಿರ್ಮಿಸಿ 30 ಫಲಾನುಭವಿಗಳಿಗೆ ಊಟ, ಬಟ್ಟೆ ಮತ್ತು ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ಕೌಟುಂಬಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು ಮತ್ತು ಕೌಶಲ ಅಭಿವೃದ್ಧಿ ತರಬೇತಿ ನೀಡುವುದು ಇದರ ಉದ್ದೇಶ. 18ವರ್ಷದವರೆಗಿನ ಯುವತಿಯರು ಹಾಗೂ 55ವರ್ಷ ಮೇಲ್ಪಟ್ಟ ವೃದ್ಧ ಮಹಿಳೆಯರಿಗೂ ಸ್ವಾಧಾರ ಗೃಹದ ಸೇವಾ ಸೌಲಭ್ಯವಿದೆ. ಈ ಬಗ್ಗೆ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು.

‌ಸಭೆಯಲ್ಲಿ ದೊಡ್ಡಬಳ್ಳಾಪುರ ಡಿವೈಎಸ್‌ಪಿ ಟಿ.ರಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪುಷ್ಪ ಜಿ. ರಾಯ್ಕರ್, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು