ಆನೇಕಲ್ ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ದೇವಿಯ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ವೀರಗಾಸೆ ಕಲಾವಿದರು
ಆನೇಕಲ್ ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ದೇವಿಯ ಬ್ರಹ್ಮರಥೋತ್ಸವದ ದನಗಳ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಸುಗಳು
ಆನೇಕಲ್ ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ದೇವಿಯ ಬ್ರಹ್ಮರಥೋತ್ಸವದ ಪ್ರಯುಕ್ತ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು

ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯವು ಎರಡನೇ ಸವದತ್ತಿಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಧಾರ್ಮಿಕ ಕಾರ್ಯಗಳಿಂದ ಗ್ರಾಮದಲ್ಲಿ ಶಾಂತಿ ನೆಮ್ಮದಿ ದೊರೆಯುತ್ತದೆ
ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜ ಗುಮ್ಮಳಾಪುರ ಸಂಸ್ಥಾನ ಮಠಗಮನ ಸೆಳೆದ ದನಗಳ ಜಾತ್ರೆ
ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಪ್ರಯುಕ್ತ ದನಗಳ ಜಾತ್ರೆಯನ್ನು ಆಯೋಜಿಸಲಾಗಿತ್ತು. ತಾಲ್ಲೂಕಿನ ವಿವಿಧೆಡೆಯ ರಾಸುಗಳು ಜಾತ್ರೆಯಲ್ಲಿ ಪಾಲ್ಗೊಂಡಿದ್ದವು. ರಾಸುಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿದ್ದರು. ರಾಸುಗಳಿಗೆ ವಿಧವಿಧದ ಅಲಂಕಾರ ಮಾಡಲಾಗಿತ್ತು.