ಭಾನುವಾರ, ಆಗಸ್ಟ್ 14, 2022
20 °C

ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ರಾಜಸ್ಥಾನದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಘಟಕದಿಂದ ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಕನ್ಹಯ್ಯ ಲಾಲ್ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿರುವುದು ಖಂಡನೀಯ. ಈ ಕೃತ್ಯಕ್ಕೆ ಮುಂಚೆ ಬೆದರಿಕೆಯೊಡ್ಡಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೃತ್ಯ ಎಸಗಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಕೃತ್ಯವನ್ನು ವೈಭವೀಕರಿಸಿ ಪ್ರಧಾನ ಮಂತ್ರಿ ಅವರಿಗೂ ಬೆದರಿಕೆ ಒಡ್ಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿ ಸಂಘಟನೆಗಳೊಂದಿಗೆ ಆರೋಪಿಗಳು ಭಾಗಿಯಾಗಿರುವುದನ್ನು ರಾಷ್ಟ್ರೀಯ ತನಿಖಾ ದಳ ದೃಢಪಡಿಸಿದೆ. ಈ ಸಂಘಟನೆಗಳು ಈಗಾಗಲೇ ದೇಶದಲ್ಲಿ ಹಲವು ದೇಶದ್ರೋಹಿ ಕೃತ್ಯಗಳನ್ನು ಹಲವಾರು ವರ್ಷಗಳಿಂದ ಅವ್ಯಾಹತವಾಗಿ ನಡೆಸುತ್ತಾ ಬರುತ್ತಿವೆ ಎಂದು ಆರೋಪಿಸಿದರು.

ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.