ಮಂಗಳವಾರ, ಏಪ್ರಿಲ್ 13, 2021
23 °C

‘ಎಲ್ಲರ ಶಾಂತಿ ಬಯಸುವ ಹಿಂದೂ ಧರ್ಮ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ಪ್ರಪಂಚದ ಎಲ್ಲ ಧರ್ಮಗಳನ್ನು ಗೌರವದಿಂದ ಕಾಣುವ ಧರ್ಮವೆಂದರೆ ಅದು ಹಿಂದೂ ಧರ್ಮ, ಇದು ಪ್ರಪಂಚದ ಎಲ್ಲರ ಒಳಿತು ಹಾಗೂ ಶಾಂತಿಯನ್ನು ಬಯಸುತ್ತದೆ ಎಂದು ಲೋಕಸಭಾ ಸದಸ್ಯ ಬಿ.ಎನ್. ಬಚ್ಚೇಗೌಡ ತಿಳಿಸಿದರು.

ನಗರದ ಅಯ್ಯಪ್ಪಸ್ವಾಮಿ ದೇವಾಲಯದ 22ನೆಯ ಸಂಸ್ಥಾಪನಾ ದಿನದಲ್ಲಿ ಮಾತನಾಡುತ್ತಿದ್ದರು.

ಪ್ರಪಂಚದಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿರುವ ದೇವಾಲಯಗಳಲ್ಲಿ ಶಬರಿಮಲೆ ಅಯ್ಯಪ್ಪ ದೇವಾಲಯವೂ ಒಂದು. ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆಯುತ್ತಾರೆ. ಇಂತಹ ನಂಬಿಕೆ ಆಚಾರ ವಿಚಾರಗಳನ್ನು ಪಾಲಿಸುವುದರಿಂದ ಮನಸ್ಸಿಗೆ ನೆಮ್ಮದಿ ಜೊತೆಗೆ ಸಾರ್ಥಕತೆಯ ಮನೋಭಾವ ಮೂಡುತ್ತದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರೂ ದೇಶದ ಜನರ ಸೇವೆ ಮಾಡುವುದರಲ್ಲಿ ಸಾರ್ಥಕತೆ ಹೊಂದುತ್ತಾರೆ ಎಂದರು.

‘ದೇಶವು 5 ವರ್ಷಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು ಮುಂದಿನ ದಿನಗಳಲ್ಲಿ ಅದು ಮತ್ತಷ್ಟು ಅಭಿವೃದ್ದಿ ಪಥದತ್ತ ಸಾಗಲಿದೆ. ಲೋಕಸಭಾ ಅಧಿವೇಶನಗಳಲ್ಲಿ ಈ ಕುರಿತು ಚರ್ಚೆ ನಡೆಯುವಾಗ ಅದನ್ನು ನೋಡಿ ಮನಸ್ಸಿಗೆ ಸಂತೋಷವಾಗುತ್ತದೆ, ನನ್ನನ್ನು ಸಂಸದನ್ನಾಗಿ ಆಯ್ಕೆಮಾಡಿದ ಜನರಿಗೆ ಧನ್ಯವಾದಗಳು’ ಎಂದರು.

ದೇವಾಲಯದ ಅಧ್ಯಕ್ಷ ಅಬಕಾರಿ ಶ್ರೀನಿವಾಸ್ ಮಾತನಾಡಿ, ಪ್ರಾರಂಭದಲ್ಲಿ ರಸ್ತೆಯ ಪಕ್ಕದಲ್ಲಿ ಸಣ್ಣದಾಗಿ ಪ್ರಾರಂಭವಾದ ದೇವಾಲಯಕ್ಕೆ ಅಂದು ಅಧಿಕಾರದಲ್ಲಿದ್ದ ಬಚ್ಚೇಗೌಡರು ಒಂದು ಎಕರೆ ಜಮೀನನ್ನು ಪುರಸಭೆಯ ಮೂಲಕ ಕೊಟ್ಟರು. ಪರಿಣಾಮವಾಗಿ ಇಂದು ಈ ರೀತಿಯ ಅಭಿವೃದ್ದಿ ಸಾಧ್ಯವಾಯಿತು ಎಂದರು.

ಮುಂದಿನ ದಿನಗಳಲ್ಲಿ ದೇವಾಲಯದ ಹಿಂದಿನ ಜಾಗದಲ್ಲಿ ಸಂಸದರ ನಿಧಿಯಿಂದ ಭಕ್ತರಿಗೆ ಪ್ರಸಾದ ವಿತರಣೆಗೆ ಭವನವನ್ನು ನಿರ್ಮಿಸಿ ಕೊಡಬೇಕೆಂದು ಮನವಿ ಮಾಡಿದರು.

ವಾಗಟದ ನರೇಂದ್ರ ಅವರು ಸಂಸದರಿಗೆ ಬೆಳ್ಳಿಯ ಕಿರೀಟ ತೊಡಿಸಿ ಸನ್ಮಾನಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.