ಹೊಸಕೋಟೆ: ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತಯಾರಿ ಉಚಿತ ತರಬೇತಿ ಕಾರ್ಯಗಾರಕ್ಕೆ ಇಲ್ಲಿನ ವೆಂಕಟಾದ್ರಿ ಸಭಾ ಭವನದಲ್ಲಿ ಬುಧವಾರ ಆರಂಭವಾಯಿತು.

ತರಬೇತಿಗೆ ಚಾಲನೆ ನೀಡಿದ ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಶೀಘ್ರದಲ್ಲೇ ರಾಜ್ಯ ಸರ್ಕಾರದಿಂದ ವಿವಿಧ ಇಲಾಖೆಗಳಿಂದ ಸುಮಾರು 54 ಸಾವಿರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ತಾಲ್ಲೂಕಿನ ಗ್ರಾಮೀಣ ಭಾಗದ ವಿಧ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹುದ್ದೆಗಳಿಸುವಂತಾಗಲಿ ಎಂಬ ಉದ್ದೇಶದಿಂದ ಅವರಲ್ಲಿ ಸ್ಪರ್ಧಾ ಮನೋಭಾವನೆ ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಗಾರಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಯಾವುದೇ ಪರೀಕ್ಷಾ ತರಬೇತಿ ಕೇಂದ್ರ ಇಲ್ಲದಿರುವ ಕಾರಣಕ್ಕೆ ಜ್ಞಾನಗಂಗೋತ್ರಿ ಸಂಸ್ಥೆ ಜೊತೆಗೆ ಒಡಂಬಡಿಕೆ ಮಾಡಿಕೊಂಡು ಉಚಿತ ತರಬೇತಿ ನೀಡಲಾಗುತಿದೆ. ಈಗಾಗಲೇ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆನ್ಲೈನ್ ನೋಂದಾಣಿ ಮಾಡಿಕೊಂಡಿದ್ಡು, ಮತ್ತಷ್ಟು ವಿಧ್ಯಾರ್ಥಿಗಳು ಮುಂದೆ ಬಂದು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹಾರೈಸಿದರು.

2,500 ಪುಸ್ತಕ ಜೊತೆ ಸುಸಜ್ಜಿತ ಅಂತರ್ ಜಾಲದ ವ್ಯವಸ್ಥೆ ಕಲ್ಪಿಸಿದ್ದು ವಿದ್ಯಾರ್ಥಿಗಳು ಬದುಕು ಕಟ್ಟಿಕೊಳ್ಳಲು ಇದನ್ನು ವೇದಿಕೆಯನ್ನಾಗಿ ಬಳಸಿಕೊಂಡು ಯಶಸ್ಸು ಗಳಿಸಿದರೆ ನಿಮ್ಮ ತಂದೆ ತಾಯಿಗಳಿಗೆ ಕೊಟ್ಟಂತಹ ಗೌರವ ಆಗುತ್ತದೆ ಎಂದು ತಿಳಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಬೈರೇಗೌಡ, ದಿ ಟೌನ್ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಬಲ್ಪ್ ಮಂಜುನಾಥ್, ನಿರ್ದೇಶಕರಾದ ಎಚ್ಎಸ್ ಗೋಪಾಲ್, ನಾರಾಯಣಗೌಡ, ದೇವರಾಜ್, ಅಂಜು, ಜ್ಞಾನ ಗಂಗೋತ್ರಿ ಸಂಸ್ಥೆಯ ಮುಖ್ಯಸ್ತ ಸುರೇಶ್ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-15-1675902298

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.