ದೊಡ್ಡಬಳ್ಳಾಪುರ: ಅಪರಾಧ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇನ್ಸ್ಪೆಕ್ಟರ್ ರಾವ್ಗಣೇಶ್ ಜನಾರ್ಧನ್ ಅವರು ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಗ್ರಾಮಗಳ 23 ಸ್ಥಳಗಳಲ್ಲಿ ಸೋಲಾರ್ ಆಧಾರಿತ ಸಿಸಿ ಟಿವಿ ಕ್ಯಾಮೆರಾಗಳನ್ನು ಸೋಮವಾರ ಅಳವಡಿಸಿದರು.

ಹೊಸಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಪತ್ತೆಹಚ್ಚುವ ಮತ್ತು ಅಪರಾಧ ತಡೆಯುವ ಸಲುವಾಗಿ ಠಾಣಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ರಸ್ತೆ, ಮುಖ್ಯ ವೃತ್ತ, ಶಾಲಾ ಆವರಣ, ಕವಲು ರಸ್ತೆ ಮತ್ತು ಅರಣ್ಯ ಪ್ರದೇಶಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಹೊಸಹಳ್ಳಿ, ಆರೂಡಿ ಗ್ರಾಮ ಪಂಚಾಯಿತಿ ಹಾಗೂ ದಾನಿಗಳ ನೆರವಿನಿಂದ 180 ಡಿಗ್ರಿ ಸುತ್ತಳತೆ ವ್ಯಾಪ್ತಿಯಲ್ಲಿ ಧ್ವನಿಸಹಿತ ಗ್ರಹಿಸುವ ಹಾಗೂ ಸ್ಪೀಕರ್ ಹೊಂದಿರುವ ಎಚ್ಡಿ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಎಲ್ಲಾ ಕ್ಯಾಮೆರಾಗಳನ್ನು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿನ ಟಿವಿ ಪರದೆಯಲ್ಲಿ ಕಾಣುವಂತೆ ನೇರ ಸಂಪರ್ಕ ಕಲ್ಪಿಸಲಾಗಿದೆ. ದಿನದ 24 ಗಂಟೆ ಕ್ಯಾಮೆರಾಗಳನ್ನು ವೀಕ್ಷಿಸಬಹುದು. ಜೊತೆಗೆ ಪೊಲೀಸ್ ಠಾಣೆ ಸಿಬ್ಬಂದಿ ಮೊಬೈಲ್ಗಳಲ್ಲಿ ಸಿಸಿ ಟಿವಿ ಮಾನಿಟರಿಂಗ್ ಮಾಡಲು ಲಿಂಕ್ ಮಾಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳ ಮೂಲಕವೇ ಸ್ಥಳದಲ್ಲಿರುವವರಿಗೆ ಎಚ್ಚರಿಕೆ ನೀಡುವ ವ್ಯವಸ್ಥೆ ಹೊಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.