ರಾಜ್ಯ ಸರ್ಕಾರ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಆಧರಿಸಿ ಅವಕಾಶ ವಂಚಿತರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸಲು ಸಮೀಕ್ಷೆ ಕೈಗೊಂಡಿರುವುದು ಒಳ್ಳೆಯ ಬೆಳವಣಿಗೆ. ಆದರೆ ಪ್ರಬಲ ಸಮುದಾಯಗಳು ಸಮೀಕ್ಷೆದಾರರಿಗೆ ತಪ್ಪು ಮಾಹಿತಿ ನೀಡಿ ನಾವು ಸಹ ಸಮಾಜದಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದವರು ಎಂದು ಬಿಂಬಿಸುತ್ತಿರುವುದು ಸಾವಿರಾರು ವರ್ಷಗಳಿಂದ ಶೋಷಿಸಲ್ಪಟ್ಟ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ದ್ರೋಹ ಬಗೆದಂತೆ. ಇಂತಹ ತಪ್ಪು ಮಾಹಿತಿಯಿಂದ ಕೂಡಿದ ಸಮೀಕ್ಷೆಯನ್ನು ಸರ್ಕಾರ ಹೇಗೆ ಪರಿಗಣಿಸುತ್ತದೆ. ಯಾವ ರೀತಿಯ ಹೆಜ್ಜೆ ಇಡುತ್ತೆ ಎಂಬುದನ್ನು ಮುಂದೆ ನೋಡಬೇಕಾಗುತ್ತದೆ.