ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡುಗೆ ಅನಿಲ ಸಿಲಿಂಡರ್‌ ಸ್ಫೋಟ: 7 ಕಟ್ಟಡ ಕಾರ್ಮಿಕರ ಸಾವು

Last Updated 1 ಏಪ್ರಿಲ್ 2023, 6:51 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ಮೇಡಿಹಳ್ಳಿಯಲ್ಲಿ ಮಾರ್ಚ್‌ 26ರಂದು ಸಂಭವಿಸಿದ್ದ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟದಲ್ಲಿ ಗಾಯಗೊಂಡಿದ್ದ ಕಟ್ಟಡ ಕಾರ್ಮಿಕರ ಪೈಕಿ ಏಳು ಮಂದಿ ಮೃತಪಟ್ಟಿದ್ದು, ಒಬ್ಬರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ‍ಪಡೆಯುತ್ತಿದ್ದಾರೆ.

ಉತ್ತರ ಪ್ರದೇಶ ಹಾಗೂ ಬಿಹಾರ ಮೂಲದ ಅಮಿತ್, ಸನೋಜ್, ನೀರಜ್, ಸೋಮಯ್ ಗುಪ್ತಾ, ತಿಲಕ್ ರಾಮ್, ಲಕ್ಷ್ಮಣ್ ಮತ್ತು ಚಂದ್ರಭಾನ್ ಮೃತಪಟ್ಟವರು.

ಈ ಕಾರ್ಮಿಕರನ್ನು ಕಟ್ಟಡ ನಿರ್ಮಾಣಕ್ಕೆ ಕರೆ ತರಲಾಗಿತ್ತು. ಎಲ್ಲರಿಗೂ ಅಂಗಡಿ ಶೆಡ್‌ವೊಂದರಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಎಲ್ಲರೂ ರಾತ್ರಿ ಮಲಗಿದ್ದ ವೇಳೆ ಅಡುಗೆ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿತ್ತು. ತೀವ್ರ ಗಾಯಗೊಂಡಿದ್ದ ಎಲ್ಲರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮೂವರು ಮೃತಪಟ್ಟಿದ್ದಾರೆ. ಶುಕ್ರವಾರ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆದಾರರಾದ ಅರವಿಂದ ಗುಪ್ತ ಮತ್ತು ಭಾಸ್ಕರ್ ಎಂಬುವರ ವಿರುದ್ಧ ಅನುಗೊಂಡನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT