ದೊಡ್ಡಗಟ್ಟಿಗನಬ್ಬೆ(ಹೊಸಕೋಟೆ): ಪಿಡಿಒ ಸಹಿ ನಕಲಿ ಮಾಡಿ, ಸುಳ್ಳು ದಾಖಲೆ ಸೃಷ್ಟಿಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ವರ್ಷದಿಂದ ಅನಧಿಕೃತವಾಗಿ ನಡೆಸುತ್ತಿದ್ದ ಆಶೀರ್ವಾದ್ ಇನ್ಫ್ರಾ ಕಾರ್ಪೋರೇಷನ್ ಸಿಮೆಂಟ್ ಘಕಟಕ್ಕೆ ಶುಕ್ರವಾರ ಬೀಗ ಜಡಿಯಲಾಗಿದೆ.

ಹೊಸಕೋಟೆ ತಾಲ್ಲೂಕು ಪಂಚಾಯತಿ, ದೊಡ್ಡಗಟ್ಟಿಗನಬ್ಬೆ ಗ್ರಾಮಪಂಚಾಯಿತಿ ಮತ್ತು ತಿರುಮಶೆಟ್ಟಿಹಳ್ಳಿ ಪೊಲೀಸ್ ಠಾಣೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಘಟಕವನ್ನು ಮುಚ್ಚಿಸಿ, ಘಟಕದ ಮಾಲೀಕ ವಸಂತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನಕಲಿ ಸಹಿ ಮತ್ತು ಸುಳ್ಳು ದಾಖಲೆ ಸೃಷ್ಟಿಸಿ ಆಶೀರ್ವಾದ್ ಇನ್ಫ್ರಾಕಾರ್ಪೋರೇಷನ್ ಹೆಸರಿನಲ್ಲಿ ಸಿಮೆಂಟ್ ಮಿಕ್ಸ್ಡ್ ಕಂಪನಿಯ ನಡೆಸುತ್ತಿರುವುದು ದೃಢಪಟ್ಟ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸಕೋಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಿನಿಪ್ಪ ತಿಳಿಸಿದರು.

ದೊಡ್ಡಗಟ್ಟಿಗನಬ್ಬೆ ಗ್ರಾಮ ಪಂಚಾಯಿತಿ ಪಿಡಿಒ ಸುಬ್ರಮಣಿ, ಮಾಜಿ ಅಧ್ಯಕ್ಷ ಸುರೇಶ್, ತಿರುಮಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಸುಂದರ್, ದೊಡ್ಡಗಟ್ಟಿಗನಬ್ಬೆ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-15-92589042

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.