ತಾವರೆಕೆರೆ(ಹೊಸಕೋಟೆ): ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಳಪ್ಪನಹಳ್ಳಿಯ ಧರ್ಮರಾಯಸ್ವಾಮಿ ಮತ್ತು ದ್ರೌಪತಾಂಭದೇವಿಯ 30ನೇ ವರ್ಷದ ಹೂವಿನ ಕರಗ ಮಹೋತ್ಸವ ಅದ್ದೂರಿಯಿಂದ ನಡೆಯಿತು.

ಗ್ರಾಮ ದೇವತೆ ಯಲ್ಲಮ್ಮ ದೇವಿ ಹಾಗೂ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಬುಧವಾರ ರಾತ್ರಿ 1.30ಕ್ಕೆ ಮೊದಲ ಬಾರಿ ಕರಗ ಹೊತ್ತ ಪೂಜಾರಿ ದಿಶಾಂತ್ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು. ವೀರ ಕುಮಾರರು ಮತ್ತು ಭಕ್ತ ಸಮೂಹ ಗೋವಿಂದ...ಗೋವಿಂದ...ಎಂದು ಜಯ ಘೋಷ ಕೂಗುತ್ತಾ ಕರಗದ ಉತ್ಸವ ಹೆಚ್ಚು ಮಾಡಿದರು.

ಗುರುವಾರ ಬೆಳಗ್ಗೆ 7 ಗಂಟೆಗೆ ಕರಗ ಇಳಿಸುವ ಮೂಲಕ ಮಹೋತ್ಸವಕ್ಕೆ ತೆರೆ ಏಳೆಯಲಾಯಿತು.

ಗ್ರಾಮದಲ್ಲಿ 25ಕ್ಕೂ ಹೆಚ್ಚು ದೇವತಾ ಉತ್ಸವ ಮೂರ್ತಿಗಳ ಪಲ್ಲಕಿ ಮೆರವಣಿಗೆ ನಡೆಯಿತು. ಕರಗದ ಅಂಗವಾಗಿ ಗ್ರಾಮದ ಎಲ್ಲಾ ದೇವಾಲಯಗಳಿಗೆ ವಿಶೇಷ ಹೂವಿನ ಅಲಂಕಾರ ದೀಪಾಲಂಕಾರ ಮಾಡಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-15-1077085852

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.