ಹೊಸಕೋಟೆ: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 92 ಕೆ.ಜಿ ಗಾಂಜಾವನ್ನು ಹೊಸಕೋಟೆ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ದೇವನಗೊಂದು ವ್ಯಾಪ್ತಿಯ ವರ್ತುಲ ರಸ್ತೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಮತ್ತು ಪೊಲೀಸರು ವಾಹನಗಳ ದಾಖಲೆ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಕಾರನ್ನು ಚಾಲಕ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ. ಆಗ ವಾಣಿಜ್ಯ ತೆರಿಗೆ ಅಧಿಕಾರಿಗಳು ಮತ್ತು ಪೊಲೀಸರು ಕಾರನ್ನು ಬೆನ್ನಟ್ಟಿದರು. ಆರೋಪಿಗಳು ಕಾರನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಕಾರನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲಾ ಎರಡು ಕೆ.ಜಿಯ ಒಟ್ಟು 46 ಗಾಂಜಾ ಪ್ಯಾಕೆಟ್ ಪತ್ತೆಯಾಗಿವೆ. ಗಾಂಜಾ ಸಮೇತ ಕಾರು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಹೊಸಕೋಟೆ ವಿಭಾಗದ ಡಿವೈಎಸ್‌ಪಿ ಶಂಕರೇಗೌಡ ಪಾಟೀಲ ತಿಳಿಸಿದ್ದಾರೆ.
ತಪಾಸಣೆ ಮಾಡುತ್ತಿದ್ದ ವೇಳೆಯಲ್ಲಿ ಓಮ್ನಿ ವಾಹನವೊಂದು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಹಿಂಬಾಲಿಸಿ ಅಧಿಕಾರಿಗಳು ಮತ್ತು ಪೊಲೀಸರು ವಾಹನದ ಸಮೇತ ೯೨ ಕೆಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹಿನ್ನೆಲೆ?
ಮಾರುತಿ ಓಮ್ನಿ ವಾಹನದಲ್ಲಿ ಗಾಂಜಾವನ್ನು ತುಂಬಿಕೊಂಡು ದುಷ್ಕರ್ಮಿಗಳು ಹೊರಟ್ಟಿದ್ದರು. ಹೊಸಕೋಟೆ ತಾಲ್ಲೂಕಿನ ದೇವನಗೊಂದಿ ವ್ಯಾಪ್ತಿಯ ರಿಂಗ್ ರೋಡ್ ನಿರ್ಮಾಣವಾಗುತ್ತಿರುವ ಪ್ರದೇಶದಲ್ಲಿ ಮಾಲೂರು ಕಡೆಯಿಂದ ಹೊಸಕೋಟೆ ಕಡೆ ಬರುತ್ತಿದ್ದ ಮಾರುತಿ ಓಮ್ನಿ ವ್ಯಾನ್(ಕೆ.ಎ ೦೩ ಎಂಜಿ ೭೬೪೯) ಅನ್ನು ರಸ್ತೆ ಬದಿಯಲ್ಲಿದ್ದ ವಾಣಿಜ್ಯ ತೆರಿಗೆ ಅಧಿಕಾರಿಗಳು ತಪಾಸಣೆಗೆ ನಿಲ್ಲಿಸಲು ಸೂಚಿಸಿದ್ದಾರೆ. ಆದರೆ, ವ್ಯಾನ್‌ನ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಸ್ವಲ್ಪ ದೂರದಲ್ಲೇ ಇದ್ದ ೧೧೨ ಪೊಲೀಸ್ ವಾಹನ ಹಾಗೂ ವಾಣಿಜ್ಯ ತೆರಿಗೆ ಅಧಿಕಾರಿಗಳು ಬೆನ್ನಟ್ಟಿದ್ದಾರೆ. ಇದನ್ನು ಅರಿತ ದುಷ್ಕರ್ಮಿಗಳು ವಾಹನ ನಿಲ್ಲಿಸಿ ಪರಾರಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.