ದೊಡ್ಡದೇನಹಳ್ಳಿ (ಹೊಸಕೋಟೆ): ಶತಮಾನಗಳಿಂದ ದಲಿತರು, ಅಸ್ಪೃಶ್ಯರು ಅನುಭವಿಸುತ್ತಿರುವ ದುಸ್ಥಿತಿಯಿಂದ ಹೊರಬರಲು ಅಂಬೇಡ್ಕರ್ ಆಶಯದಂತೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದು ವೈಎಸ್ಎಂ ಮಂಜುನಾಥ್ ಹೇಳಿದರು.

ತಾಲ್ಲೂಕಿನ ಜಡಿಗೆನಹಳ್ಳಿ ಹೋಬಳಿ ದೊಡ್ಡನಲ್ಲಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡದೇನಹಳ್ಳಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದರು.

ಅಂಬೇಡ್ಕರ್ ಶೋಷಿತ ವರ್ಗದ ಧ್ವನಿಯಾಗಿದ್ದು ಶಿಕ್ಷಣದ ಮೂಲಕ ಅವರ ಚಿಂತನೆಗಳನ್ನು ಇಂದಿನ ಯುವಪೀಳಿಗೆ ಅರ್ಥಮಾಡಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕಿದೆ ಎಂದು ಹೇಳಿದರು.

ದಲಿತ ಹೋರಾಟಗಾರ ಚಿನ್ನಸ್ವಾಮಿ ಮಾತನಾಡಿ, ತುಳಿತಕ್ಕೆ ಒಳಗಾದ ಸಮುದಾಯಗಳು ಒಗ್ಗಟ್ಟು ಪ್ರದರ್ಶಿಸಿದಾಗ ಮಾತ್ರ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬುದು ಜಾರಿಗೊಳ್ಳಲು ಸಾಧ್ಯ ಎಂದು ಹೇಳಿದರು.

ಸಂಜಯ್ ಮತ್ತು ತಂಡದಿಂದ ಅಂಬೇಡ್ಕರ್ ಬದುಕಿನ ಕುರಿತಾದ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು.

ಅಂಬೇಡ್ಕರ್ ಜಯಂತಿಯಲ್ಲಿ ಲಕ್ಷ್ಮಣ್, ದೊಡ್ಡ ಅರಳೆಗೆರೆ ನಾಗೇಶ್, ಪೋಲಿಸ್ ಗೋಪಾಲಕೃಷ್ಣ, ರಮೇಶ್, ಅಪ್ಪಯಣ್ಣ ಹಾಗೂ ದೊಡ್ಡನಲ್ಲಾಲ ಅಶ್ವಥ್, ಅನಿಲ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-15-1895648594

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.