ಭಾನುವಾರ, ಏಪ್ರಿಲ್ 2, 2023
25 °C

ಹೊಸಕೋಟೆ: ಅಣ್ಣಮ್ಮ ದೇವಿ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ನಗರದ ಮೇಲಿನ ಪೇಟೆಯ ಬೇವಿನಮರದ ಬೀದಿಯಲ್ಲಿರುವ ಆದಿಶಕ್ತಿ ಅಣ್ಣಮ್ಮ ದೇವಿ ದೇವಾಲಯದಲ್ಲಿ ಅಣ್ಣಮ್ಮ ದೇವಿ ಮಹೋತ್ಸವ ನಡೆಯಿತು.

ಊರಿನ ಪ್ರಮುಖ ಬೀದಿಗಳಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ, ದೀಪೋತ್ಸವ ಸೇರಿದಂತೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ವಹ್ನಿಕುಲ ಕ್ಷತ್ರಿಯ ಯುವ ವೇದಿಕೆ ಅಧ್ಯಕ್ಷ ಅಖಿಲ್ ಕುಮಾರ್‌, ಆದಿಶಕ್ತಿ ಅಣ್ಣಮ್ಮ ದೇವಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ರವಿ, ಉಮೇಶ್ ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಕೃಷ್ಣಪ್ಪ, ಮೋಹನ್ ಹಾಗೂ ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು