ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ: ಕ್ಷುಲಕ ಕಾರಣಕ್ಕೆ ಪರಿಶಿಷ್ಟರ ಮೇಲೆ ಹಲ್ಲೆ

Published 24 ನವೆಂಬರ್ 2023, 5:16 IST
Last Updated 24 ನವೆಂಬರ್ 2023, 5:16 IST
ಅಕ್ಷರ ಗಾತ್ರ

ಹೊಸಕೋಟೆ: ನಂದಗುಡಿ ಹೋಬಳಿಯ ಕೆಂಬಡಿಗಾನಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಪರಿಶಿಷ್ಟ ಜಾತಿಯ ಮುನಿ ಕೆಂಪಣ್ಣ (60) ಮತ್ತು ಅವರ ಮಗ ನಾಗರಾಜ್‌(36) ಎಂಬುವರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಲಾಗಿದೆ.

ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ವಿರುದ್ಧ ಜಾತಿ ನಿಂದನೆ, ಕೊಲೆ ಯತ್ನ, ಮಾರಕಾಸ್ತ್ರ ಬಳಕೆ ಸೇರಿದಂತೆ ಇತರ ಸೆಕ್ಷನ್‌ ಅಡಿ ನಂದಗುಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌ 

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶ ಸಿದ್ಧರಾಜು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿದ್ದಾರೆ. ಈ ವೇಳೆ ಸಂತ್ರಸ್ತರ ಕುಟುಂಬದವರು ಸೂಕ್ತ ಪೊಲೀಸ್‌ ಬಂದೋಬಸ್ತ್‌ ನೀಡುವಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT