ಹೊಸಕೋಟೆ: ನಗರದ ಸಮೀಪ ಹಲಸಹಳ್ಳಿ ಗೇಟ್ ಸಮೀಪ ಹೊಸಕೋಟೆ ಮತ್ತು ಕೋಲಾರ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶನಿವಾರ ಮಧ್ಯರಾತ್ರಿ ಲಾರಿ, ಕಂಟೇನರ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರು ಹೊತ್ತಿ ಉರಿದ್ದಿದು ಮೂವರಿಗೆ ಸುಟ್ಟ ಗಾಯಗಳಾಗಿವೆ.

ಕಾರಿನಲ್ಲಿದ್ದ ಕೋಲಾರದ ಶಯನ್, ಶ್ರೀನಿವಾಸ್ ಮತ್ತು ಮಹಮದ್ ಸಾಹೇಬ್ ಗಾಯಗೊಂಡಿದ್ದಾರೆ. ಎಲ್ಲರೂ ಬೆಂಗಳೂರಿನ ಅವಲಹಳ್ಳಿ ಸಮೀಪ ಕಿತ್ತಗಾನಹಳ್ಳಿಯಲ್ಲಿ ಕೆಲಸ ಮಾಡುತ್ತಿದ್ದರು.

ಹೆದ್ದಾರಿಯಲ್ಲಿ ಯೂ–ಟರ್ನ್ ತೆಗೆದುಕೊಳ್ಳುತ್ತಿದ್ದ ಕಂಟೇನರ್ಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ತಕ್ಷಣ ಎರಡೂ ವಾಹನಗಳು ಹೊತ್ತಿ ಉರಿದಿವೆ. ಬೆಂಕಿ ನಂದಿಸಲು ಎರಡು ಅಗ್ನಿಶಾಮಕ ವಾಹನದ ಸಿಬ್ಬಂದಿಯೊಂದಿಗೆ ಸ್ಥಳೀಯರು ಕೈಜೋಡಿಸಿದರು. ಹೊಸಕೋಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.