ಹೊಸಕೋಟೆ: ಉಪವಿಭಾಗ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆ ಮತ್ತು ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಒಟ್ಟು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ.

ಡಿವೈಎಸ್ಪಿ ಮಲ್ಲೇಶ್ ಅವರ ನೇತೃತ್ವದಲ್ಲಿ ಟಿಎಸ್ಹಳ್ಳಿ ಠಾಣೆ ಇನ್ಸ್ಪೆಕ್ಟರ್ ಸುಂದರ್ ಹಾಗೂ ನಂದಗುಡಿ ಠಾಣೆ ಇನ್ಸ್ಪೆಕ್ಟರ್ ಶಾಂತರಾಮ ಅವರ ನೇತೃತ್ವದ ತಂಡಗಳು ಕಾರ್ಯಾಚರಣೆ ನಡೆಸಿ ಬಂಧಿತರಿಂದ ಒಟ್ಟು 5.5 ಕೆ.ಜಿ ಗಾಂಜಾ, ಎಂಡಿಎಮ್ಎ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ತಿರುಮಲಶೆಟ್ಟಿಹಳ್ಳಿ ಮತ್ತು ನಂದಗುಡಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.