ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಕೋಟೆ: 28,804 ಚಿಣ್ಣರಿಗೆ ಪೋಲಿಯೋ

Published 2 ಮಾರ್ಚ್ 2024, 6:06 IST
Last Updated 2 ಮಾರ್ಚ್ 2024, 6:06 IST
ಅಕ್ಷರ ಗಾತ್ರ

ಹೊಸಕೋಟೆ: ಮಾರ್ಚ್ 3 ರಿಂದ 6 ರವರೆಗೆ ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮ ಅಂಗವಾಗಿ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಯಿತು.

ತಹಶೀಲ್ದಾರ್ ವಿಜಯ್‌ಕುಮಾರ್ ಮಾತನಾಡಿ‌, ದೇಶಕ್ಕೆ ಸಧೃಡ, ಆರೋಗ್ಯವಂತೆ ಮಕ್ಕಳನ್ನು ರೂಪಿಸುವ ಉದ್ದೇಶದಿಂದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಇದಕ್ಕಾಗಿ ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಉಮೇಶ್ ಮಾತನಾಡಿ, ತಾಲ್ಲೂಕಿನಲ್ಲಿ 0–5 ವರ್ಷದೊಳಗಿನ ಒಟ್ಟು 28,804 ಮಕ್ಕಳಿವೆ. ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಾರ್ವಜನಿಕ ಆಸ್ಪತ್ರೆಯ ಒಳಗೊಂಡತೆ  ತಾಲ್ಲೂಕಿನಾದ್ಯಂತ ಒಟ್ಟು 115 ಬೂತ್‌ಗಳು ಕರ್ತವ್ಯ ನಿರ್ವಹಿಸಲಿವೆ ಎಂದು ಹೇಳಿದರು.

ಬೂತ್‌ನಲ್ಲಿ 512 ಸಂಖ್ಯೆಯ ಆರೋಗ್ಯ ಕಾರ್ಯಕರ್ತರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್ ಮಾತನಾಡಿ, ತಾಲೂಕಿನಾದ್ಯಂತ 512 ಆರೋಗ್ಯ ಕಾರ್ಯಕರ್ತರು ಮತ್ತು ಶ್ರೀ ಲಕ್ಷ್ಮೀದೇವಿ ನರ್ಸಿಂಗ್ ಕಾಲೇಜಿನಿಂದ ಸುಮಾರು 50 ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಎಂವಿಜೆ ನರ್ಸಿಂಗ್ ಕಾಲೇಜಿನ ಸುಮಾರು 70 ನರ್ಸಿಂಗ್ ವಿದ್ಯಾರ್ಥಿಗಳು ಅಭಿಯಾನಕ್ಕೆ ಸಾಥ್‌ ನೀಡಲಿದ್ದಾರೆ ಎಂದು ಹೇಳಿದರು.

ಮಾರ್ಚ್ 3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ರವರೆಗೆ ನಡೆಯಲಿದ್ದು, ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ ಎಲ್ಲಾ ಮಕ್ಕಳು ತಪ್ಪದೆ ಪೋಲಿಯೋ ಹನಿ ಹಾಕಿಸಿಕೊಳ್ಳಲು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT