ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಕೋಟೆ: ಸಾರ್ವಜನಿಕರಿಂದ ಒಂಟೆ ರಕ್ಷಣೆ

Published 18 ಜೂನ್ 2024, 15:36 IST
Last Updated 18 ಜೂನ್ 2024, 15:36 IST
ಅಕ್ಷರ ಗಾತ್ರ

ಹೊಸಕೋಟೆ: ನಗರದಲ್ಲಿ ಅನುಮಾನಾಸ್ಪದವಾಗಿ ತೆಗೆದುಕೊಂಡು ಹೋಗುತ್ತಿದ್ದ ಒಂಟೆಯನ್ನು ಸಾರ್ವಜನಿಕರು ರಕ್ಷಣೆ ಮಾಡಿದ ಘಟನೆ ನಗರದಲ್ಲಿ ಸೋಮವಾರ ನಡೆದಿದೆ.

ಹೊಸಕೋಟೆಯಲ್ಲಿ ಈದ್-ಉಲ್-ಅದಾ ಹಬ್ಬದಂದು ಇಬ್ಬರು ವ್ಯಕ್ತಿಗಳು ಒಂಟೆಯನ್ನು ಹಿಡಿದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ ಸಾರ್ವಜನಿಕರು ಒಂಟೆ ಹಾಗೂ ಅದನ್ನು ಹಿಡಿದುಕೊಂಡಿದ್ದ ವ್ಯಕ್ತಿಗಳನ್ನು ತಡೆದು ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆಗಳಿಗೆ ಉತ್ತರಿಸಲಾಗದೆ ವ್ಯಕ್ತಿಗಳು ಒಂಟಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ನಂತರ ಒಂಟೆಯನ್ನು ದೀನ ದಯ ಗೋವಿನ ಆಶ್ರಮಕ್ಕೆ ನೀಡಿ ರಕ್ಷಣೆ ಮಾಡಲಾಗಿದೆ. ೧೦ ವರ್ಷದ ಒಂಟೆಯನ್ನು ಈದ್-ಉಲ್-ಅದಾ ಹಬ್ಬದ ಹಿನ್ನಲೆಯಲ್ಲಿ ಮಾರಾಟಕ್ಕೆ ತಂದಿದ್ದರು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT