ಸಮೇತನಹಳ್ಳಿ(ಹೊಸಕೋಟೆ): ಗ್ರಾಮ ಪಂಚಾಯಿತಿಯಿಂದ 140ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸಮೂಹ ಸೀಮಂತ ನಡೆಸಲಾಯಿತು.ಸಂಪ್ರದಾಯದಂತೆ ಶಾಸ್ತ್ರ ನೆರವೇರಿಸಲಾಯಿತು.

ಪ್ರತಿಯೊಬ್ಬ ಗರ್ಭಿಣಿಯರಿಗೂ ಅರಿಶಿನ-ಕುಂಕುಮ ನೀಡಿ, ಹೂವು, ಹಣ್ಣು, ಬಳೆ ಹಾಗೂ ಉಡುಗೊರೆ ನೀಡಲಾಯಿತು.

ಯಾವುದೇ ಹೆಣ್ಣಿಗೆ ಗರ್ಭಾವಸ್ಥೆಯ ಸಮಯದಲ್ಲಿ ಸಂತೋಷ ಮತ್ತು ಉತ್ತಮ ಆರೈಕೆ ವಾತಾವರಣ ಸೃಷ್ಟಿಸಬೇಕು. ಇದರಿಂದ ತಾಯಿ ಮತ್ತು ಮಗುವಿನ ಆರೋಗ್ಯ ಚೆನ್ನಾಗಿರುತ್ತದೆ ಎಂದು ಶಾಸಕರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಗರ್ಭಿಣಿಯರಿಗೆ ಮಗುವಿನ ಆರೋಗ್ಯ ಹಾಗೂ ಪೌಷ್ಟಿಕಾಂಶದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಗ್ರಾಮ ಪಂಚಾಯಿತಿಯು ಈ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ತಾ.ಪಂ ಇಒ ಮುನಿಯಪ್ಪ, ಸಮೇತನಹಳ್ಳಿ ಗ್ರಾ.ಪಂ. ಅಧ್ಯಕ್ಷ ಕಾಂತರಾಜು, ಪಿಡಿಒ ಪ್ರಸಾದ್, ಬಮೂಲ್ ನಿರ್ದೇಶಕ ಕೆಎಂಎಂ ಮಂಜುನಾಥ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಮುತ್ಕೂರು ಮುನಿರಾಜು, ಮಾಜಿ ಅಧ್ಯಕ್ಷ ಬಾಬುರೆಡ್ಡಿ, ಹೊಸಕೋಟೆ ಯೋಜನಾ ಪ್ರಾಧಿಕಾರದ ಸದಸ್ಯರಾದ ಕೆ.ಸಿ.ಸುರೇಶ್ ಗೌಡ, ಸಮೇತನಹಳ್ಳಿ ಸೊಣ್ಣಪ್ಪ, ಯಲ್ಲಪ್ಪ , ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲತಾರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-15-1558401969

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.