ಹೊಸಕೋಟೆ: ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಲವೇ ದಿನಗಳಲ್ಲಿ ಪತನವಾಗಲಿದ್ದು, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪತನಗೊಂಡ ನಂತರ ಮತ್ತೆ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆ ರೋಸಿ ಹೋಗಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ಜನತೆ ಮುಕ್ತಿ ಬಯಸಿದ್ದಾರೆ ಎಂದರು.