ಹೊಸಕೋಟೆ: ತಾಲ್ಲೂಕಿನಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ(ಎಸ್ಐಆರ್) ಸಿದ್ಧತೆ ನಡೆಯುತ್ತಿದ್ದು, ಶೇ 90 ರಷ್ಟು ಮ್ಯಾಪಿಂಗ್ ಪೂರ್ಣಗೊಂಡಿದೆ ಎಂದು ತಾಲ್ಲೂಕು ಮತದಾರರ ನೋಂದಣಾಧಿಕಾರಿ ಶಿವಕುಮಾರ್ ತಿಳಿಸಿದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 293 ಮತಗಟ್ಟೆಗಳಿಂದ ಒಟ್ಟು 2,46,143 ಮತದಾರರು ಇದ್ದಾರೆ. ಇದುವರೆಗೆ 2,21,500ಕ್ಕೂ ಹೆಚ್ಚು ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದೆ. ಉಳಿದ 24,643 ಮತದಾರರ ಮ್ಯಾಪಿಂಗ್ ಕಾರ್ಯ ಮಾತ್ರ ಬಾಕಿ ಇದ್ದು, ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಾರ್ವಜನಿಕರು ತಮ್ಮ ಮನೆ ಬಾಗಿಲಿಗೆ ಬರುವ ಬಿಎಲ್ಒಗಳು ಮತ್ತು ಮೇಲ್ವಿಚಾರಕರಿಗೆಸೂಕ್ತ ಮಾಹಿತಿ ನೀಡುವ ಮೂಲಕ ಸಹಕಾರ ನೀಡಬೇಕು. 18 ವರ್ಷ ಪೂರ್ಣಗೊಳಿಸಿರುವ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು. ಮರಣ ಹೊಂದಿರುವವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ವಿವಾಹದ ನಂತರ ಬೇರೆ ಕ್ಷೇತ್ರಕ್ಕೆ ತೆರಳಿರುವವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವ ನಕಲಿ ಮತದಾರರ ಹೆಸರನ್ನು ಪರಿಶೀಲನೆಯ ನಂತರ ಪಟ್ಟಿಯಿಂದ ತೆಗೆದುಹಾಕಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ಮತದಾರರ ಪಟ್ಟಿಯನ್ನು ರದ್ದುಗೊಳಿಸಿ, ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ 2025ರ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರನ್ನು ಅವರ ಕುಟುಂಬ ಸದಸ್ಯರೊಂದಿಗೆ ಜೋಡಿಸುವ ‘ಮ್ಯಾಪಿಂಗ್’ ಕಾರ್ಯ ಕೈಗೊಳ್ಳಲಾಗುತ್ತಿದೆ. ತಂದೆ-ಮಕ್ಕಳು, ಅಜ್ಜ-ಮೊಮ್ಮಕ್ಕಳು ಹಾಗೂ ವಿವಾಹದ ನಂತರ ಸ್ಥಳಾಂತರಗೊಂಡಿರುವ ಕುಟುಂಬದ ಸದಸ್ಯರ ಮಾಹಿತಿಯನ್ನು ಈ ಪ್ರಕ್ರಿಯೆಯಲ್ಲಿ ಜೋಡಿಸಲಾಗುತ್ತಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿನ ನಕಲಿ ಹೆಸರು, ಅನಗತ್ಯ ಸೇರ್ಪಡೆಗಳು ಹಾಗೂ ಸ್ಥಳಾಂತರಗೊಂಡ ಮತದಾರರ ವಿವರಗಳನ್ನು ಗುರುತಿಸಿ ಸರಿಪಡಿಸುವ ಉದ್ದೇಶದಿಂದ ಈ ಪ್ರಕ್ರಿಯೆ ಜಾರಿಗೊಳಿಸಲಾಗಿದೆ ಎಂದು ತಹಶೀಲ್ದಾರ್ ಟಿ.ಎಸ್.ಶೀತಲ್ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮುನಿಯಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-15-1663429455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.