ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಕೋಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಅಡ್ಡಾದಿಡ್ಡಿ ವಾಹನ ಚಾಲನೆ ಪ್ರಶ್ನಿಸಿದ್ದಕ್ಕೆ ಕೊಲೆ: ಶಂಕೆ
Published 16 ಜೂನ್ 2024, 16:00 IST
Last Updated 16 ಜೂನ್ 2024, 16:00 IST
ಅಕ್ಷರ ಗಾತ್ರ

ಹೊಸಕೋಟೆ: ಹೊಸಕೋಟೆ ತಾಲ್ಲೂಕಿನ ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿ–75ರ ಮೈಲಾಪುರ ಸಮೀಪ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿದೆ.

ತಾಲ್ಲೂಕಿನ ಗಂಗಾಪುರ ಗ್ರಾಮದ ನವೀನ್ ನಾಯಕ್(27) ಕೊಲೆಯಾದ ಯುವಕ.

ತರಕಾರಿ ವ್ಯಾಪಾರಿಯಾಗಿದ್ದ ನವೀನ್ ನಾಯಕ್ ಶನಿವಾರ ರಾತ್ರಿ ತರಕಾರಿ ತರಲು ಕೆ.ಆರ್.ಪುರ ಮಾರಕಟ್ಟೆಗೆ ಹೋಗಿದ್ದರು. ತರಕಾರಿ ಖರೀದಿಸಿ ಭಾನುವಾರ ಬೆಳಗಿನ ಜಾವ ಸ್ವಗ್ರಾಮಕ್ಕೆ ಮರಳುವ ವೇಳೆ ಘಟನೆ ನಡೆದಿದೆ.

ಮೈಲಾಪುರ ಗ್ರಾಮದ ಬಳಿ ಹೆದ್ದಾರಿಯಲ್ಲಿ ಕಾರೊಂದು ಅಡ್ಡಾದಿಡ್ಡಿ ಹೋಗುತ್ತಿದ್ದನ್ನು ನವೀನ್ ನಾಯಕ್ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ಕಾರಿನಲ್ಲಿದ್ದವರು ಜಗಳಕ್ಕೆ ಇಳಿದರು. ಜಗಳ ವಿಕೋಪಕ್ಕೆ ತಿರುಗಿ ನವೀನ್ ನಾಯಕ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಪ್ರತ್ಯದರ್ಶಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೊಲೆ ಆರೋಪಿಗಳಿಗೆ ಹುಡಕಾಟ ನಡೆಸುಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ಹೊಸಕೋಟೆ ಪೊಲೀಸರು, ಶ್ವಾನದಳ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮೃತ ದೇವನ್ನಯ ಶವಪರೀಕ್ಷೆಗೆ ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತರ ಸಂಬಂಧಿಕರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT