ಸೂಲಿಬೆಲೆ(ಹೊಸಕೋಟೆ):ಹೋಬಳಿಯ ಕಂಬಳೀಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ಸಮುದಾಯದತ್ತ ಶಾಲೆ’ ಕಾರ್ಯಕ್ರಮದಲ್ಲಿ ಕಂಬಳೀಪುರ ಗ್ರಾಮ ಪಂಚಾಯತಿಯಿಂದ ಕಂಬಳೀಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 10 ಡೆಸ್ಕ್ ವಿತರಣೆ ಮಾಡಲಾಯಿತು.

ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಮಂಜುನಾಥ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಬಡವರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕಾರಣ ಶೈಕ್ಷಣಿಕ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳ ಬಲವರ್ದನೆಗೆ ಕ್ರಮವಹಿಸಲಾಗುತ್ತಿದೆ. ಮತ್ತಷ್ಟು ಸ್ವಯಂಸೇವಕ ಸಂಘ ಸಂಸ್ಥೆ, ದಾನಿಗಳು ಮುಂದೆ ಬಂದರೆ ಮಾತ್ರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿಗೊಳಿಸಿ, ಸಬಲೀಕರಣ ಮಾಡಬಹುದು ಎಂದು ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಸರ್ಕಾರಿ ಶಾಲೆಯಲ್ಲೂ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಾರೆ ಎಂಬುದನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಮಲ್ಲಿಕಾಅವೀನ್, ಸದಸ್ಯರಾದ ಮುನಿಯಪ್ಪ, ರಮೇಶ್, ರಾಮಯ್ಯ,ಮಂಜುನಾಥ್, ಶಾಲಾ ಉಪಾಧ್ಯಕ್ಷ ವೆಂಕಟೇಶ್, ಮಾಜಿ ಅಧ್ಯಕ್ಷ ಆಂಜಿನಪ್ಪ, ರಾಮಕೃಷ್ಣ, ಮುಖ್ಯಶಿಕ್ಷಕ ಎಡ್ವರ್ಡ್ ಡಿಸೋಜಾ, ಸಂಗೀತ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.