ಸೂಲಿಬೆಲೆ(ಹೊಸಕೋಟೆ): ಮುಂದಿನ ದಿನಗಳಲ್ಲಿ ಬೇಗೂರಿನಲ್ಲಿ ಕಾರ್ಮಿಕ ವಸತಿ ಶಾಲೆ ಹಾಗೂ ಸೂಲಿಬೆಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 1 ಎಕರೆ ಜಾಗವನ್ನು ಮಂಜೂರು ಮಾಡಿ ಶಾದಿ ಮಹಲ್ ನಿರ್ಮಾಣಕ್ಕೆ ಅನುವು ಮಾಡಿಕೊಡುವುದಾಗಿ ಶಾಸಕ ಶರತ್ ಬಚ್ಚೇಗೌಡ ಭರವಸೆ ನೀಡಿದರು.

ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಉರ್ದು ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ನಿರ್ಮಾಣವಾಗಿರುವ ಶಾಲಾ ಕೊಠಡಿ, ರಂಗಮಂದಿರ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಸೂಲಿಬೆಲೆ ಹೋಬಳಿ ಹಾಗೂ ನಂದುಗುಡಿ ಹೋಬಳಿ 55 ಕೆರಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಶೀಘ್ರವೇ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಇಂದಿನ ಸ್ಪರ್ದಾತ್ಮಕ ಜಗತ್ತಿನಲ್ಲಿ ಮನುಷ್ಯ ಮೌಲ್ಯ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಮನುಷ್ಯತ್ವ ಮತ್ತು ಸಂಸ್ಕಾರ ಉಳಿಯಬೇಕಾದರೆ ಗುಣಮಟ್ಟ ಮತ್ತು ಮೌಲ್ಯಯುತ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಹೇಳಿದರು.

ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ 340 ವಿದ್ಯಾರ್ಥಿಗಳಿಗೆ ಟ್ರಾಕ್ ಸೂಟ್ ಹಾಗೂ ಬ್ಯಾಗ್ಗಳನ್ನು ವೈಯಕ್ತಿಕವಾಗಿ ವಿತರಿಸಿದರು.

ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಗ್ರಾ.ಪಂ.ಅಧ್ಯಕ್ಷ ಜನಾರ್ಧನರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಕ್ಬರ್ ಅಲಿಖಾನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.