ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಬಿಎಂಪಿ ವ್ಯಾಪ್ತಿಗೆ ಹೊಸಕೋಟೆ: ಡಿಕೆಶಿ ಸುಳಿವು

Published 11 ಮಾರ್ಚ್ 2024, 5:57 IST
Last Updated 11 ಮಾರ್ಚ್ 2024, 5:57 IST
ಅಕ್ಷರ ಗಾತ್ರ

ಹೊಸಕೋಟೆ: ಹೊಸಕೋಟೆಗೆ ಮೆಟ್ರೊ ತರಲು ಡಿಪಿಆರ್ ತಯಾರಿಸಲು ಆದೇಶಿಸಲಾಗುವುದು. ಹೊಸಕೋಟೆ ಬೆಂಗಳೂರಿನ ಹೆಬ್ಬಾಗಿಲು, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ, ದೇವನಹಳ್ಳಿ, ನೆಲಮಂಗಲ ನಾವೆಲ್ಲರೂ ಬೆಂಗಳೂರಿನವರು. ಮುಂದಿನ ದಿನಗಳಲ್ಲಿ ಬೆಂಗಳೂರಿನ ಜನರಿಗೆ ಏನ ಸಿಗುತ್ತದೆಯೋ ಅದು ನಿಮ್ಮಲ್ಲರಿಗೂ ಸಿಗಲಿದೆ‌ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುವ ಮೂಲಕ ಹೊಸಕೋಟೆಯನ್ನು ಬಿಬಿಎಂಪಿಗೆ ಸೇರಿಸುವ ಸುಳಿವು ನೀಡಿದರು.

ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ₹600 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎತ್ತಿನಹೊಳೆ–ಕಾಮಗಾರಿ ಶೀಘ್ರ ಪೂರ್ಣ: ಬಯಲು ಸೀಮೆ ಭಾಗದ ನೀರಿನ ಸಮಸ್ಯೆ ಬಗೆಹರಿಸಲು ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿ ನೀರನ್ನು ಈಗಾಗಲೇ ಪೂರೈಸಲಾಗುತ್ತಿದೆ. ಎತ್ತಿನ ಹೊಳೆ ಯೋಜನೆ ತುಮಕೂರಿನ ವರೆಗೆ ಬಂದಿದೆ. ದೊಡ್ಡಬಳ್ಳಾಪುರದ ಬಳಿ ಭೂಮಿ ಸ್ವಾಧೀನ ಪಡಿಸಲಾಗುತ್ತಿದೆ. ಆದಷ್ಟು ಬೇಗ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಡಿಕೆಶಿ ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಜತೆಗೆ ಕ್ರಾಂತಿಕಾರ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ. ಇತ್ತೀಚೆಗೆ ಒಂದೇ ದಿನ 10 ಸಾವಿರ ಜನರಿಗೆ ಉದ್ಯೋಗ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸೇರಿದ್ದ ಜನಸ್ತೋಮ.
ಕಾರ್ಯಕ್ರಮದಲ್ಲಿ ಸೇರಿದ್ದ ಜನಸ್ತೋಮ.
ಕಾರ್ಯಕ್ರಮದಲ್ಲಿ ಸೇರಿದ್ದ ಜನಸ್ತೋಮ
ಕಾರ್ಯಕ್ರಮದಲ್ಲಿ ಸೇರಿದ್ದ ಜನಸ್ತೋಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT