ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಶಾಸಕ ಬಚ್ಚೇಗೌಡ

ಕೋಟೂರಿನಲ್ಲಿ ವಿವೇಕ ಕೊಠಡಿ ನಿರ್ಮಾಣಕ್ಕೆ ಚಾಲನೆ
Published 4 ಸೆಪ್ಟೆಂಬರ್ 2024, 15:33 IST
Last Updated 4 ಸೆಪ್ಟೆಂಬರ್ 2024, 15:33 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವ ಜೊತೆಗೆ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಂದು ಶಾಸಕ ಬಚ್ಚೇಗೌಡ ತಿಳಿಸಿದರು.

ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಕೋಟೂರು ಗ್ರಾಮದಲ್ಲಿ ಇತ್ತೀಚೆಗೆ ವಿವೇಕ ಶಿಕ್ಷಣ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಗಳು ಶಿಥಿಲಾವಸ್ಥೆ ತಲುಪಿದ್ದ ಹಿನ್ನೆಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ವಿವೇಕ ಶಿಕ್ಷಣ ಯೋಜನೆಯಡಿ ಅನುದಾನ ಒದಗಿಸಿ ಹೊಸ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಜೊತೆಗೆ ಸಿಎಸ್‌ಆರ್ ಅನುದಾನದಲ್ಲಿ ಒಂದು ಕೊಠಡಿ ನಿರ್ಮಾಣಕ್ಕೆ ಅನುದಾನ ದೊರಕಿಸಲಾಗಿದೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಗುಣಮಟ್ಟದ ಕೆಲಸ ಮಾಡಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಮುತ್ಸಂದ್ರ ಬಾಬುರೆಡ್ಡಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜೊತೆ ಜೊತೆಗೆ ದಾನಿಗಳ ನೆರವು ಕೂಡ ಅಗತ್ಯ. ಆದ್ದರಿಂದ ಸಿಎಸ್‌ಆರ್ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಕೊಠಡಿ ನಿರ್ಮಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದರು.

ಬಮುಲ್ ನಿರ್ದೇಶಕ ಕೆಎಂಎಂ ಮಂಜುನಾಥ್, ಅನುಗೊಂಡನಹಳ್ಳಿ ಹೋಬಳಿ ಮುಖಂಡ ಬೋಧನ ಹೊಸಹಳ್ಳಿ ಪ್ರಕಾಶ್, ಬಿಎಂಆರ್‌ಡಿಎ ಸದಸ್ಯ ಕೊರಳೂರು ಸುರೇಶ್, ಸಮೇತನಹಳ್ಳಿ ಗ್ರಾಪಂ ಅಧ್ಯಕ್ಷ ಕಾಂತರಾಜು, ಅನುಗೊಂಡನಹಳ್ಳಿ ಗ್ರಾಪಂ ಅಧ್ಯಕ್ಷ ಮುತ್ಕೂರು ಸಂತೋಷ್, ಬಿಎಂಆರ್‌ಡಿಎ ಮಾಜಿ ಅಧ್ಯಕ್ಷ ಟಿಕೆಆರ್ ಕೃಷ್ಣಾರೆಡ್ಡಿ, ಗುತ್ತಿಗೆದಾರ ಬ್ಯಾಟೆಗೌಡ, ಮುತ್ಕುರು ಮುನಿರಾಜು, ಯಡಗೊಂಡನಹಳ್ಳಿ ರಾಧಾಕೃಷ್ಣ, ಮಲ್ಲಸಂದ್ರ ಶೇಷಪ್ಪ, ಸಮೇತನಹಳ್ಳಿ ಸೊಣ್ಣಪ್ಪ, ರಾಮಸ್ವಾಮಿಪಾಳ್ಯ ವಸಂತ್ ಕುಮಾರ್, ವಿನೋದ್ ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT