ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ: ₹30 ಕೋಟಿ ವೆಚ್ಚದಲ್ಲಿ ಎಪಿಎಂಸಿ ಮಾರುಕಟ್ಟೆ

Published 23 ಆಗಸ್ಟ್ 2023, 16:03 IST
Last Updated 23 ಆಗಸ್ಟ್ 2023, 16:03 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿಯ ಗೊಣಕನಹಳ್ಳಿ ಸಮೀಪ ₹30 ಕೋಟಿ ವೆಚ್ಚದ ಅಂತರರಾಷ್ಟ್ರೀಯ ಎಪಿಎಂಸಿ ಕೃಷಿ ಮತ್ತು ಹೂ ಮಾರುಕಟ್ಟೆ ನಿರ್ಮಾಣ ಸಂಬಂಧ ಸಭೆ ನಡೆಯಿತು.

ನಗರದ ತಾಲೂಕು ಕಚೇರಿಯಲ್ಲಿ ಜಿಲ್ಲಾಧಿಕಾರಿ ಎನ್‌. ಶಿವಶಂಕರ್ ಹಾಗೂ ತಹಶೀಲ್ದಾರ್‌ ವಿಜಯಕುಮಾರ್ ಅವರೊಂದಿಗೆ ಶಾಸಕ ಶರತ್ ಬಚ್ಚೇಗೌಡ ಅವರು ಚರ್ಚಿಸಿದರು.

ಈ ಭಾಗದ ರೈತರಿಗೆ ಅಂತರಾಷ್ಟ್ರೀಯ ದರ್ಜೆಯ ಮಾರುಕಟ್ಟೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಡೆದ ಸಭೆಯಲ್ಲಿ ಎಪಿಎಂಸಿ ಮಾರುಕಟ್ಟೆಯನ್ನು ವೈಜ್ಞಾನಿಕವಾಗಿ ಮತ್ತು ರೈತ ಸ್ನೇಹಿಯಾಗಿ ರೂಪಿಸುವ ಕುರಿತು ಚರ್ಚಿಸಲಾಯಿತು.

ಸಭೆಯ ಬಳಿಕ ಗೊಣಕನಹಳ್ಳಿಯಲ್ಲಿರುವ ಎಪಿಎಂಸಿ ಜಾಗವನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಎಪಿಎಂಸಿ ಆಡಳಿತಾಧಿಕಾರಿ ಡಾ.ರಾಜಣ್ಣ, ಅಧೀಕ್ಷಕ ಎಂಜಿನಿಯರ್‌ ರಘುನಂದನ್, ಎಪಿಎಂಸಿ ಅಧಿಕಾರಿ ರೂಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT