ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯುವ ಯತ್ನ: ಮಂಜುನಾಥ್ ಅಣ್ಣಯ್ಯ

Published : 5 ಆಗಸ್ಟ್ 2024, 14:18 IST
Last Updated : 5 ಆಗಸ್ಟ್ 2024, 14:18 IST
ಫಾಲೋ ಮಾಡಿ
Comments

ಹೊಸಕೋಟೆ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಎಳ್ಳಷ್ಟು ಇಲ್ಲ. ಬಿಜೆಪಿ–ಜೆಡಿಎಸ್ ವಿನಾಕಾರಣ ಅವರ  ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ್ ಅಣ್ಣಯ್ಯ ದೂರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳಂಕರಹಿತ ವ್ಯಕ್ತಿ ಸಿದ್ದರಾಮಯ್ಯ ಅವರ ಆಡಳಿತ ಸಹಿಸದ ವಿಪಕ್ಷಗಳು ಅವರ ಹೆಸರನ್ನು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಮತ್ತು 14 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರು ಪಾರದರ್ಶಕ ಆಡಳಿತ ನೀಡುವ ಮೂಲಕ ಕಳಂಕರಹಿತ ವ್ಯಕ್ತಿಯಾಗಿದ್ದು, ದಸಸಂಕ ಸಂಘಟನೆ ಅವರ ಬೆನ್ನಿಗೆ ಸದಾ ನಿಲ್ಲಲಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT