ದೊಡ್ಡಬಳ್ಳಾಪುರ: ನಗರದ ರಾಜೀವ್ ಗಾಂಧಿ ಬಡಾವಣೆ ಎರಡನೇ ಹಂತದಲ್ಲಿ ಗುರುವಾರ ವಿದ್ಯುತ್ ಶಾರ್ಟ್ ಸರ್ಕೀಟ್ ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಇಡೀ ಮನೆ ಹೊತ್ತಿ ಉರಿದಿದೆ.
ಸೋಮಶೇಖರ್ ಮತ್ತು ಅಂಬಿಕಾ ದಂಪತಿ ವಾಸವಾಗಿದ್ದ ಮನೆಯಲ್ಲಿ ವಿದ್ಯುತ್ ಅವಘಡದಿಂದ ಮನೆಯಲ್ಲಿದ್ದ ಸಾಮಾನುಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಅದೃಷ್ಟವಶಾತ್ ಗಂಡ, ಹೆಂಡತಿ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುವಾರ ರಾತ್ರಿ 1 ಗಂಟೆಗೆ ಸುಮಾರಿನಲ್ಲಿ ವಿದ್ಯುತ್ ಅವಘಡ ನಡೆದಿದೆ. ಮನೆಯಲ್ಲಿದ್ದ ದಿನಸಿ, ಬಟ್ಟೆ, ಗೃಹೋಪಯೋಗಿ ವಸ್ತುಗಳ ಜೊತೆಗೆ, 6 ಮತ್ತು 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮಕ್ಕಳ ಶಾಲಾ ಪುಸ್ತಕಗಳು, ದಾಖಲೆ ಪತ್ರಗಳು, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ ಸೇರಿದಂತೆ ಎಲ್ಲವು ಬೆಂಕಿಯಲ್ಲಿ ಸುಟ್ಟು ಹೋಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.