ದೊಡ್ಡಬಳ್ಳಾಪುರ: ಡಾ.ಎಚ್.ಎಸ್.ವೆಂಕಟೇಶಮೂರ್ತಿ ಕನ್ನಡ ಸುಗಮ ಸಂಗೀತ ಸಾಹಿತ್ಯ ಕ್ಷೇತ್ರಕ್ಕೆ ಅತ್ಯುತ್ತಮ ಭಾವಗೀತೆಗಳನ್ನು ನೀಡಿದ ಕವಿಗಳಲ್ಲಿ ಪ್ರಮುಖರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಕೆ.ಆರ್.ರವಿಕಿರಣ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಡಾ.ರಾಜ್ಕುಮಾರ್ ಕಲಾಮಂದಿರದಲ್ಲಿ ಭಾನುವಾರ ನಡೆದ ಡಾ.ಎಚ್.ಎಸ್.ವೆಂಕಟೇಶಮೂರ್ತಿ ಅವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಸಾಹಿತ್ಯ ಲೋಕದ ಯಾವ ಪಂಥಕ್ಕೂ ಸೇರದ ಎಚ್ಎಸ್ವಿ ತಮ್ಮ ಸೃಜನಶೀಲತೆಯನ್ನು ನಿರಂತರವಾಗಿ ಉಳಿಸಿಕೊಂಡು ಬಂದವರು. ಕಾವ್ಯ, ನಾಟಕ, ವಿಮರ್ಶೆ, ಕಥೆ, ಕಾದಂಬರಿ, ಮಕ್ಕಳ ಸಾಹಿತ್ಯ ಮುಂತಾದ ಹಲವು ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡುವ ಮೂಲಕ ಕನ್ನಡ ಸಾಹಿತ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಕೋಶಾಧ್ಯಕ್ಷ ನಂ.ಮಹಾದೇವ, ಎಚ್.ಎಸ್. ವೆಂಕಟೇಶಮೂರ್ತಿ ಅವರ ಬುದ್ಧಚರಣ ಮಹಾಕಾವ್ಯ ಗಮಕವಾಚನ ಮತ್ತು ಗೀತಗಾಯನದ ಮೂಲಕ ಸಹೃದಯರಿಗೆ ಸುಲಭವಾಗಿ ಅರ್ಥವಾಗುತ್ತದೆ. ಮಹಾಕಾವ್ಯ ಪರಂಪರೆಯನ್ನು ಮುಂದುವರಿಸಿದ ಕವಿ ಎಲ್ಲಾ ವಯೋಮಾನದ ಓದುಗರಿಗೂ ಪ್ರೀತಿ ಪಾತ್ರರಾಗಿದ್ದರು ಎಂದರು.

ಜವಾಹರ್ ನವೋದಯ ವಿದ್ಯಾಲಯದ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ, ಎಚ್ಎಸ್ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸುಗಮ ಸಂಗೀತ, ಕಿರುತೆರೆ, ಸಿನಿಮಾ ಕ್ಷೇತ್ರದಲ್ಲೂ ಗಣನೀಯ ಸಾಧನೆ ಮಾಡಿದ್ದಾರೆ. ‘ಐದು ಬೆರಳು ಕೂಡಿ ಒಂದು ಮುಷ್ಟಿಯು, ಹಲವು ಮಂದಿ ಸೇರಿ ಈ ಸಮಷ್ಟಿಯು, ಬೇರೆ ಬೇರೆ ಒಕ್ಕಲು ಒಂದೆ ತಾಯ ಮಕ್ಕಳು’ ಎಂದು ಬರೆದ ಈ ಹಾಡು ರಾಷ್ಟ್ರೀಯ ಭಾವನೆಗಳನ್ನು ತೋರಿಸುತ್ತದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ ಮಾತನಾಡಿ, ಗಾಯಕ ಸಿ.ಅಶ್ವಥ್ ಮತ್ತು ಕವಿ ಎಚ್.ಎಸ್.ವೆಂಕಟೇಶಮೂರ್ತಿ ಜೋಡಿ ಕನ್ನಡ ಭಾವಗೀತೆ ಮೂಲಕ ಜನಪ್ರಿಯರಾದವರು. ಚಲನಚಿತ್ರ ಮತ್ತು ರಂಗಭೂಮಿಯೊಡನೆ ನಿರಂತರ ಸಂಪರ್ಕ ಹೊಂದಿದ್ದ ಅವರು ಚಲನಚಿತ್ರಗಳಿಗೆ ರಚಿಸಿದ ಹಾಡುಗಳು, ಸಂಭಾಷಣೆ, ದೂರದರ್ಶನ ಧಾರಾವಾಹಿಗಳಿಗೆ ಶೀರ್ಷಿಕೆ ಗೀತೆ, ಭಾವಗೀತೆಗಳ ಧ್ವನಿ ಸುರಳಿಗಳಿಗೆ ರಚಿಸಿದ ಹಾಡುಗಳು ಕನ್ನಡಿಗರ ಮನದಾಳದಲ್ಲಿ ಸದಾ ಅಚ್ಚಳಿಯದೆ ಉಳಿದಿವೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜು, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ಸೂರ್ಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಅಣ್ಣಯ್ಯ, ಜ್ಞಾನಗಂಗಾ ಪ್ರೌಢಶಾಲೆ ಶಿಕ್ಷಕ ಕೋದಂಡರಾಮ, ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು, ಕಸಬಾ ಹೋಬಳಿ ಘಟಕದ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಷಫೀರ್, ಕಲಾವಿದ ಬಾಶೆಟ್ಟಿಹಳ್ಳಿ ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.