ಶುಕ್ರವಾರ, ಫೆಬ್ರವರಿ 21, 2020
25 °C

ವಿಜೃಂಭಣೆಯ ಹುಲುಕುಡಿ ವೀರಭದ್ರಸ್ವಾಮಿ ಮಹಾರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಇಲ್ಲಿನ ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ಮಹಾರಥೋತ್ಸವ ರಥಸಪ್ತಮಿ ದಿನವಾದ ಶನಿವಾರ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದಲ್ಲಿ ತಾಲ್ಲೂಕಿನ ಭಕ್ತಾದಿಗಳು ಸೇರಿದಂತೆ ವಿವಿಧೆಡೆಗಳಿಂದ ಸಾವಿರಾರು ಜನ ಭಾಗವಹಿಸಿ, ರಥಕ್ಕೆ ಹಣ್ಣು ಧವನ ಅರ್ಪಿಸಿದರು.

ಹುಲುಕುಡಿ ಬೆಟ್ಟದ ಮೇಲಿನ ವೀರಭದ್ರಸ್ವಾಮಿ ದೇಗುಲಕ್ಕೂ ಸಹಸ್ರಾರು ಜನ ಭಕ್ತಾದಿಗಳು ಭೇಟಿ ನೀಡಿ ದರ್ಶನ ಪಡೆದರು. ದೇವಾಲಯದಲ್ಲಿ ರಥಾಂಗ ಹೋಮ ಹಾಗೂ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಹಾ ರಥೋತ್ಸವದಲ್ಲಿ ಭಾಗವಹಿಸಿದ್ದ ವೀರಗಾಸೆ ಕುಣಿತ ಹಾಗೂ ಡೊಳ್ಳು ಕುಣಿತ, ಅಕ್ಕಿ ಪೂಜೆ, ದೀಪಾರಾಧನೆ ಮೆರುಗು ನೀಡಿದವು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ‘ಹುಲುಕುಡಿ ಕ್ಷೇತ್ರ ತನ್ನದೇ ಆದ ಪುರಾಣ ಇತಿಹಾಸ ಹೊಂದಿದ್ದು, ವಿಶಿಷ್ಟವಾಗಿದೆ. ತಾಲ್ಲೂಕಿನ ಘಾಟಿ ಹಾಗೂ ಕನಸವಾಡಿಯಂತೆ ಅಭಿವೃದ್ಧಿ ಹೊಂದುತ್ತಿದೆ. ಭಕ್ತಾದಿಗಳು ಕ್ಷೇತ್ರದಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕೆಲಸಗಳಲ್ಲಿ ಕೈಜೋಡಿಸುವ ಮೂಲಕ ಕ್ಷೇತ್ರದ ಪ್ರಗತಿಗೆ ಎಲ್ಲರು ಸಹಕರಿಸಬೇಕು’ ಎಂದು ಹೇಳಿದರು.

ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಆರ್.ಡಿ.ನರಸಿಂಹಯ್ಯ, ಕಾರ್ಯದರ್ಶಿ ಸಿದ್ದಲಿಂಗಯ್ಯ, ಟ್ರಸ್ಟಿಗಳಾದ ಬಿ.ಎಸ್.ಚೆನ್ನೇಗೌಡ, ಆನಂದ್, ಸಿದ್ದಲಿಂಗಪ್ಪ, ಮಾರೇಗೌಡ ಭಾಗವಹಿಸಿದ್ದರು.

ಶಾಸಕ ಟಿ.ವೆಂಕಟರಮಣಯ್ಯ ಸಹೋದರರು ಹಾಗೂ ಸೀಗೇಪಾಳ್ಯ ಬಸವರಾಜ್, ವೀರಣ್ಣ, ಕಾಂತರಾಜ್, ಬಸವರಾಜಯ್ಯ ಅವರ ವತಿಯಿಂದ ಜಾತ್ರೆಗೆ ಆಗಮಿಸಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು