ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ: ಜಿಲ್ಲಾಧಿಕಾರಿ

ಸಂವಿಧಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಘನತೆಗೂ ಆದ್ಯತೆ
Published 11 ಡಿಸೆಂಬರ್ 2023, 12:59 IST
Last Updated 11 ಡಿಸೆಂಬರ್ 2023, 12:59 IST
ಅಕ್ಷರ ಗಾತ್ರ

ದೇವನಹಳ್ಳಿ: ಪ್ರತಿಯೊಬ್ಬರ ಹಕ್ಕು ರಕ್ಷಣೆ ಮಾಡುವುದು ‌ನಾಗರಿಕರ ಜವಾಬ್ದಾರಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ.ಎನ್ ಹೇಳಿದರು.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಭಾನುವಾರ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ರಕ್ಷಣೆ ನೀಡುವ ಹಕ್ಕುಗಳನ್ನು ವಿವರಿಸಲಾಗಿದೆ. ಜೀವನದ ಸ್ವಾತಂತ್ರ್ಯ, ಸಮಾನತೆ ಮತ್ತು ವ್ಯಕ್ತಿಯ ಘನತೆಯೇ ಮಾನವ ಹಕ್ಕುಗಳು. ಯಾರಿಗೂ ತಾರತಮ್ಯ ಸಲ್ಲದು ಎಂದು ಹೇಳಿದರು.

ವಕೀಲರಾದ ಚಿನ್ನಮ್ಮ ಮಾತನಾಡಿ, 75ನೇ ಮಾನವ ಹಕ್ಕುಗಳ ದಿನಾಚರಣೆಯನ್ನು ಸ್ವಾತಂತ್ರ್ಯ, ಸಮಾನತೆ, ಎಲ್ಲರಿಗೂ ನ್ಯಾಯ ಎಂಬ ಧ್ಯೇಯದೊಂದಿಗೆ ಆಚರಣೆ ಮಾಡಲಾಗುತ್ತಿದೆ. ಮಾನವ ಹಕ್ಕುಗಳ ಉಲ್ಲಂಘನೆ ತಡೆಯುವುದು ರಕ್ಷಣೆ ಮಾಡುವುದು ಇದರ ಉದ್ದೇಶವಾಗಿದೆ. ಅಂಗವಿಕಲರು, ಸ್ಥಳಿಯರು, ವಲಸಿಗರನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಮಾನವ ಹಕ್ಕುಗಳ ದಿನಾಚರಣೆ ಆಚರಿಸಲಾಗುತ್ತಿದೆ. ಸಾಮಾನ್ಯವಾಗಿ ಕೌಟುಂಬಿಕ ಕಲಹ ಉಂಟಾದಾಗ ನೇರವಾಗಿ ಮಾನವ ಹಕ್ಕುಗಳ ಆಯೋಗಕ್ಕೆ ಅಥವಾ ಪೋಲಿಸ್ ಸ್ಟೇಷನ್ ಗೆ ದೂರು ನೀಡದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಸಖಿ ಕೇಂದ್ರಗಳಲ್ಲಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಅನಿತಾ ಲಕ್ಷ್ಮಿ ಸ್ವಾಗತಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಎಚ್, ಸಾಮಾಜಿಕ ಅರಣ್ಯ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಖ್ಯ ಯೋಜನಾಧಿಕಾರಿ ರಾಮಕೃಷ್ಣ, ಜಿಲ್ಲಾಮಟ್ಟದ ಅಧಿಕಾರಿಗಳು, ಪೋಲಿಸ್ ಇಲಾಖೆ ಸಿಬ್ಬಂದಿ, ಶಾಲಾ ಕಾಲೇಜು ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

ದೂರು ಸಲ್ಲಿಸಿ: ರಾಜ್ಯದ ಯಾವುದೇ ಸಾರ್ವಜನಿಕ ಕಚೇರಿಯಿಂದಾಗಲಿ ಅಥವಾ ಸಂಸ್ಥೆಯಿಂದಾಗಲಿ  ಮಾನವ ಹಕ್ಕುಗಳ ಉಲ್ಲಂಘನೆಯಾದ ಪಕ್ಷದಲ್ಲಿ https://kshrc.karnataka.gov.in ಮಾನವ ಹಕ್ಕುಗಳ ಆಯೋಗದ ವೆಬ್‌ಸೈಟ್‌ ಮೂಲಕ ದೂರು ಸಲ್ಲಿಸಬಹುದು ಅಥವಾ ದೂರು ನಿರ್ವಹಣ ವ್ಯವಸ್ಥೆ ವೆಬ್ ಸೈಟ್‌ www.hrcnet.nic.in ಆನ್‌ಲೈನ್‌ ಮೂಲಕ ಸಲ್ಲಿಸಬಹುದು. ಮಾಹಿತಿಗೆ 180042523333, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ದೂರವಾಣಿ ಸಂಖ್ಯೆ 080-22392201 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT