ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೇಕಲ್: ‘ಹಸಿವು ಮುಕ್ತ ಸಮಾಜ’ ಬೈಕ್‌ ರ‍್ಯಾಲಿ

Published 28 ಜನವರಿ 2024, 4:36 IST
Last Updated 28 ಜನವರಿ 2024, 4:36 IST
ಅಕ್ಷರ ಗಾತ್ರ

ಆನೇಕಲ್: ಗಣರಾಜ್ಯೋತ್ಸವ ಪ್ರಯುಕ್ತ ಅಲಯನ್ಸ್‌ ವಿಶ್ವವಿದ್ಯಾಲಯದ ವತಿಯಿಂದ ‘ಹಸಿವು ಮುಕ್ತ ಸಮಾಜ’ ಎಂಬ ಘೋಷಣೆಯೊಂದಿಗೆ ಬೈಕ್‌ ರ‍್ಯಾಲಿ ನಡೆಯಿತು.

ಅಲಯನ್ಸ್‌ ವಿಶ್ವವಿದ್ಯಾಲಯದ ನಿರ್ದೇಶಕ ಶೈಲಾ ಛೆಬ್ಬಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಯುವ ಸಮುದಾಯ ಕೊಡುಗೆ ನೀಡಬೇಕು. ಯುವ ಶಕ್ತಿ ಈ ದೇಶದ ಶಕ್ತಿಯಾಗಿದೆ. ಹಸಿವು ಮುಕ್ತ ಸಮಾಜವನ್ನು ನಿರ್ಮಿಸುವತ್ತ ಪ್ರತಿಯೊಬ್ಬರು ಕೈಜೋಡಿಸಬೇಕು. ವಿಶ್ವವಿದ್ಯಾಲಯಗಳಲ್ಲಿ ಹೇಳಿಕೊಡಲಾಗದ ಪಾಠ ಹಸಿವು ಹೇಳಿಕೊಡುತ್ತದೆ. ಆದರೆ ಇಂದಿನ ಸಮಾಜದಲ್ಲಿ ಯಾರೊಬ್ಬರು ಹಸಿವಿನಿಂದ ಬಳಲಬಾರದು ಎಂಬುದು ನಮ್ಮ ಉದ್ದೇಶವಾಗಿದೆ. ಇದಕ್ಕಾಗಿ ಜಾಗೃತ ಸಮಾಜದ ನಿರ್ಮಾಣದ ಅವಶ್ಯಕತೆಯಿದೆ ಎಂದು ಹೇಳಿದರು.

ಅಲಯನ್ಸ್‌ ವಿಶ್ವವಿದ್ಯಾಲಯದ ವತಿಯಿಂದ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದರು.

ವಿಶ್ವವಿದ್ಯಾಲಯದ ಉಪಕುಲಪತಿ ಶಾನ್‌, ರಿಜಿಸ್ಟ್ರಾರ್‌ ನಿವೇದಿತಾ ಮಿಶ್ರಾ ಇದ್ದರು. ಗಣರಾಜ್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT