ಗ್ರಾಮೀಣ ಪ್ರತಿಭೆ ಗುರುತಿಸಿ: ನಿಸರ್ಗ ನಾರಾಯಣಸ್ವಾಮಿ

6
ಬೆಂಗಳೂರು ವಿಭಾಗೀಯ ಮಟ್ಟದ ಕೊಕ್ಕೊ ಪಂದ್ಯಾವಳಿ

ಗ್ರಾಮೀಣ ಪ್ರತಿಭೆ ಗುರುತಿಸಿ: ನಿಸರ್ಗ ನಾರಾಯಣಸ್ವಾಮಿ

Published:
Updated:
Deccan Herald

ದೇವನಹಳ್ಳಿ: ದೈನಂದಿನ ಜೀವನದಲ್ಲಿ ಕ್ರಿಯಾತ್ಮಕ ಚಟುವಟಿಕೆಯ ಮತ್ತೊಂದು ರೂಪವೇ ಕ್ರೀಡೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ತಾಲ್ಲೂಕಿನ ಬೊಮ್ಮವಾರ ಬಳಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ನಡೆದ 2018–19ನೇ ಸಾಲಿನ 14 ಮತ್ತು 17 ವರ್ಷದ ಬಾಲಕ ಬಾಲಕಿಯರ ಬೆಂಗಳೂರು ವಿಭಾಗೀಯ ಮಟ್ಟದ ಕೊಕ್ಕೊ ಪಂದ್ಯಾವಳಿಯ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮನುಷ್ಯನಿಗೆ ದೈಹಿಕ ಶ್ರಮ ಇಲ್ಲದಿದ್ದರೆ ದೇಹದ ಕಲ್ಮಶ ಹೊರಬರುವುದಿಲ್ಲ. ಕನಿಷ್ಠ ಒಂದು ಗಂಟೆ ಬೆವರು ಸುರಿಸಿದರೆ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ. ಮಕ್ಕಳು ಕನಿಷ್ಠ 2 ರಿಂದ 3 ಗಂಟೆ ಆಟೋಟಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೈಹಿಕ ಮತ್ತು ಮಾನಸಿಕ ಸ್ಥಿರತೆ ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ. ಕ್ರೀಡಾ ಕ್ಷೇತ್ರ ಉಜ್ವಲ ಆಗಬೇಕಾದರೆ ಗ್ರಾಮೀಣ ಪ್ರದೇಶದ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ಪಾರದರ್ಶಕವಾಗಿರಬೇಕು. ಕರಾರುವಾಕ್ಕಾದ ತೀರ್ಪು ನೀಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಯಮ್ಮ ಲಕ್ಷ್ಮೀನಾರಾಯಣ ಮಾತನಾಡಿ, ವ್ಯಾಸಂಗದ ಜತೆ ಕ್ರೀಡಾ ಚಟುವಟಿಕೆ ನಿರಂತರವಾಗಿರಬೇಕು. ಕೆಲ ವಿದ್ಯಾರ್ಥಿಗಳು 10ನೇ ತರಗತಿ ಮತ್ತು ಪಿಯುಸಿ ನಂತರ ಕ್ರೀಡೆಯನ್ನು ಕೈ ಬಿಡುತ್ತಾರೆ. ಗ್ರಾಮೀಣ ಭಾಗದಲ್ಲಿ ಕೆಲವರು ಟೆನಿಸ್ ಬಾಲ್, ಕ್ರಿಕೆಟ್‌ನಲ್ಲಿ ತೊಡಗಿಸಿಕೊಳ್ಳತ್ತಾರೆ. ಹಳ್ಳಿಗಾಡಿನ ಕ್ರೀಡೆಗಳಾದ ಕುಸ್ತಿ, ಕಬಡ್ಡಿ, ಕೊಕ್ಕೊ ಕುರಿತು ಆಸಕ್ತಿವಹಿಸಬೇಕು. ಕ್ರೀಡೆಗೆ ಗಂಡು ಹೆಣ್ಣು ಭೇದ ಇಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳಗುವ ನಕ್ಷತ್ರಗಳಾಗಬೇಕು ಎಂದು ಆಶಿಸಿದರು.

ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ರಾಧಮ್ಮ ಮುನಿರಾಜು, ಸದಸ್ಯ ಕೆ.ಸಿ. ಮಂಜುನಾಥ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ, ಉಪಾಧ್ಯಕ್ಷೆ ನಂದಿನಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಮೂರ್ತಿ, ಟಿಎಪಿಎಂಎಸ್‌ಸಿ ನಿರ್ದೇಶಕ ಕೊಡಿಮಂಚೇನಹಳ್ಳಿ ನಾಗೇಶ್, ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಬಿ.ಮುನೇಗೌಡ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮಲ್ಲಪ್ಪ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀನಾರಾಯಣ, ಎಪಿಎಂಸಿ ನಿರ್ದೇಶಕ ಕೆ.ವಿ. ಮಂಜುನಾಥ್, ಪುರಸಭೆ ಸದಸ್ಯ ರವೀಂದ್ರ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಕೆ.ಮುನಿಯಪ್ಪ, ತಾಲ್ಲೂಕು ಅಧ್ಯಕ್ಷ ವೈ.ವಿ.ಚಂದ್ರಶೇಖರ್, ಕಾರ್ಯದರ್ಶಿ ಜಿ.ಶ್ರೀನಿವಾಸ್, ಖಜಾಂಚಿ ವೆಂಕಟೇಶ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !