ಉತ್ತಮ ನಡವಳಿಕೆ ಇದ್ದರೆ ರೌಡಿ ಪಟ್ಟಿಯಿಂದ ಹೊರಗೆ

ಶುಕ್ರವಾರ, ಏಪ್ರಿಲ್ 26, 2019
32 °C
ವಿಜಯಪುರ ನಗರದ ಪೊಲೀಸ್ ಠಾಣಾ ಆವರಣದಲ್ಲಿ ರೌಡಿಶೀಟರ್‌ಗಳ ಪರೇಡ್‌

ಉತ್ತಮ ನಡವಳಿಕೆ ಇದ್ದರೆ ರೌಡಿ ಪಟ್ಟಿಯಿಂದ ಹೊರಗೆ

Published:
Updated:
Prajavani

ವಿಜಯಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಪೊಲೀಸ್ ಠಾಣಾ ಆವರಣದಲ್ಲಿ ಶುಕ್ರವಾರ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳ ಪರೇಡ್‌ ಅನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಡಾ.ರಾಮ್ ನಿವಾಸ್ ಸಪೆಟ್ ನಡೆಸಿದರು.

ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿದರೆ, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದರೆ ನಿಮ್ಮ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಗೂಂಡಾ ಕಾಯ್ದೆ ಅಡಿ ಜೈಲಿಗೆ ಕಳುಹಿಸುವುದಾಗಿ ಅವರು ಎಚ್ಚರಿಕೆ ನೀಡಿದರು.

ವಿಜಯಪುರ, ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಸುಮಾರು 65 ರೌಡಿಗಳನ್ನು ಠಾಣೆಗೆ ಕರೆಸಿದ್ದೇವೆ. ರೌಡಿ ಶೀಟರ್‌ಗಳು ಚುನಾವಣೆ ಸಂದರ್ಭದಲ್ಲಿ ಇಂತಹ ಪಕ್ಷಕ್ಕೆ ಮತದಾನ ಮಾಡಿ ಎಂದು ಒತ್ತಾಯ ಮಾಡುವುದಾಗಲಿ, ಯಾವುದೇ ವ್ಯಕ್ತಿಗಳ ಮೇಲೆ ಪ್ರಭಾವ ಬೀರುವುದಾಗಿ ಮಾಡುವಂತಿಲ್ಲ ಎಂದು ತಿಳಿಸಿದರು.

ಪೊಲೀಸ್ ಇಲಾಖೆ ನಿಮ್ಮೆಲ್ಲರ ನಡುವಳಿಕೆ ಮತ್ತು ದೈನಂದಿನ ಚಟುವಟಿಕೆಗಳ ಮೇಲೆ ನಿಗಾ ವಹಿಸಿರುತ್ತದೆ. ಇಲಾಖೆಯಿಂದ ನೀಡುವ ಯಾವುದೇ ಸೂಚನೆಗಳನ್ನು ಉಲ್ಲಂಘಟನೆ ಮಾಡಿರುವುದು ಕಂಡು ಬಂದರೆ ಅಂತಹವರ ಮೇಲೆ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ ಎಂದರು.

ಡಿವೈಎಸ್‌ಪಿ ಮೋಹನ್‌ ಕುಮಾರ್ ಮಾತನಾಡಿ, ‘ಉತ್ತಮ ನಡವಳಿಕೆ ಗಮನಿಸಿ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದೇ ಇದ್ದರೆ ಅಂತಹ ರೌಡಿಶೀಟರ್ ಪಟ್ಟಿಯಿಂದ ತೆಗೆದುಹಾಕಲು ಅವಕಾಶವಿದೆ. ಈ ಅವಕಾಶ ನೀವೆಲ್ಲರೂ ಬಳಸಿಕೊಳ್ಳಿ’ ಎಂದರು.

ಸರ್ಕಲ್ ಇನ್ಸ್‌ಪೆಕ್ಟರ್ ಪ್ರಕಾಶ್ ಮಾತನಾಡಿ, ‘ನಮ್ಮ ವೃತ್ತದಲ್ಲಿ ಕಂಡು ಬರುತ್ತಿರುವ ಅಕ್ರಮ ಮದ್ಯ ಮಾರಾಟ, ಜೂಜಾಟಗಳು, ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳ ನಡೆಸುತ್ತಿರುವ ಬಗ್ಗೆ ಗಮನಕ್ಕೆ ಬಂದ ಕೂಡಲೇ ಮೇಲಧಿಕಾರಿಗಳ ಸೂಚನೆ ಹಾಗೂ ಮಾರ್ಗದರ್ಶನದಲ್ಲಿ ಸೂಕ್ತ ಕ್ರಮ ಜರುಗಿಸಲಾಗುತ್ತಿದೆ’ ಎಂದು ತಿಳಿಸಿದರು.

ಸಬ್ ಇನ್‌ಸ್ಪೆಕ್ಟರ್‌ಗಳಾದ ನರೇಶ್ ನಾಯಕ್, ಚನ್ನರಾಯಪಟ್ಟಣ ಸಬ್ ಇನ್‌ಸ್ಪೆಕ್ಟರ್‌ ವೆಂಕಟೇಶ್, ವಿಶ್ವನಾಥಪುರ ಸಬ್ ಇನ್‌ಸ್ಪೆಕ್ಟರ್‌ ಮಂಜುನಾಥ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !