ಮಂಗಳವಾರ, ಆಗಸ್ಟ್ 4, 2020
22 °C

ದೇವನಹಳ್ಳಿ:ಸಮಸ್ಯೆ ಬಗೆಹರಿಯದಿದ್ದರೆ ಚಳವಳಿ, ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ‘ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಯನ್ನು ಬಗೆಹರಿಸದಿದ್ದರೆ ಅಸಹಕಾರ ಚಳವಳಿ ಮಾಡಬೇಕಾಗುತ್ತದೆ’ ಎಂದು ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಪುಷ್ಪಲತಾ ಎಚ್ಚರಿಕೆ ನೀಡಿದರು.

ಇಲ್ಲಿನ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸಂಘದ ವತಿಯಿಂದ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ‘ಇಂಥ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ₹ 25 ಸಾವಿರ ಪ್ರೋತ್ಸಾಹ ಧನ, ಉಚಿತ ಬಸ್ ಪಾಸ್ ಮತ್ತು ಊಟದ ವೆಚ್ಚವನ್ನು ನೀಡಬೇಕು’ ಎಂದು ಒತ್ತಾಯಿಸಿದರು.

‘ನಿವೃತ್ತರಾಗಿರುವ ಕಾರ್ಯಕರ್ತೆಯರಿಗೆ ನಿವೃತ್ತಿ ವೇತನ ಮತ್ತು ಅಂಗನವಾಡಿ ಮೇಲ್ವಿಚಾರಕರಿಗೆ ಸೇವಾ ಹಿರಿತನದ ಅನ್ವಯ ಮುಂಬಡ್ತಿ ನೀಡಬೇಕು’ ಎಂದು ಆಗ್ರಹಿಸಿದರು.

ಸಂಘದ ಕಾರ್ಯದರ್ಶಿ ವಾಸಂತಿ ಮಾತನಾಡಿ, ‘ಅಂಗನವಾಡಿ ನೌಕರರು ಜೀವದ ಹಂಗುತೊರೆದು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕನಿಷ್ಟ ₹ 50 ಲಕ್ಷ ವಿಮೆ ಸೌಲಭ್ಯ ನೀಡಬೇಕು. ನೌಕರರನ್ನು ಈವರೆಗೆ ಸರ್ಕಾರ ಕಾಯಂ ಮಾಡಿಲ್ಲ. ಜತೆಗೆ, ಕಾರ್ಯಕರ್ತೆಯರಿಗೆ ₹ 30 ಸಾವಿರ, ಸಹಾಯಕಿಯರಿಗೆ ₹ 21 ಸಾವಿರ ವೇತನ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಎಲ್ಲ ಬೇಡಿಕೆಗಳು ಈ ತಿಂಗಳ ಅಂತ್ಯದೊಳಗೆ ಈಡೇರಿಸಬೇಕು. ಇಲ್ಲದಿದ್ದರೆ, ಆಗಸ್ಟ್ ತಿಂಗಳಿಂದ ಅಸಹಕಾರ ಚಳವಳಿಯನ್ನು ರಾಜ್ಯದಾದ್ಯಂತ ನಡೆಸಲಾಗುವುದು’ ಎಂದು ಹೇಳಿದರು.

ಸಂಘದ ಖಜಾಂಚಿ ಸಿ.ಕೆ. ಅನಸೂಯ ಹಾಗೂ ಸದಸ್ಯರು ಇದ್ದರು. ಇದೇ ಸಂದರ್ಭದಲ್ಲಿ ಸಿಡಿಪಿಒ ಹೇಮಾವತಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು