ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಿದರೆ ನಿರುದ್ಯೋಗ ನಿವಾರಣೆ: ಸಚಿವ ಮುನಿಯಪ್ಪ

Published 8 ಮಾರ್ಚ್ 2024, 15:20 IST
Last Updated 8 ಮಾರ್ಚ್ 2024, 15:20 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ಲೋಕಸಭಾ ಚುನಾವಣೆಯಲ್ಲಿ ಯುವಕರು ಬೆಂಬಲ ನೀಡಿದರೆ ನಿರುದ್ಯೋಗದ ಸಮಸ್ಯೆ, ನೀರಾವರಿ ಸಮಸ್ಯೆ ನಿವಾರಿಸಲು ರಾಜ್ಯ ಸರ್ಕಾರಕ್ಕೆ ಮತ್ತಷ್ಟು ಶಕ್ತಿ ಬರುತ್ತದೆ ಎಂದು ಕೆ.ಎಚ್‌.ಮುನಿಯಪ್ಪ ಹೇಳಿದರು.

ಹೋಬಳಿಯ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಹಳ್ಳಿಮನೆ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ನಡೆದ ಪಂಚಾಯಿತಿ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರದಲ್ಲಿ 10 ವರ್ಷಗಳ ಕಾಲ ಆಡಳಿತ ನಡೆಸಿರುವ ಬಿಜೆಪಿ ಸರ್ಕಾರ ನಿರುದ್ಯೋಗದ ಸಮಸ್ಯೆ ನಿವಾರಣೆ ಮಾಡಿಲ್ಲಿ‌. ಯುವಕರಿಗೆ ಕೆಲಸ ಕೊಡಲಿಲ್ಲ. ಬೆಲೆ ಏರಿಕೆ ಮಾಡಿದೆ. ರಸಗೊಬ್ಬರಗಳ ಬೆಲೆ ಏರಿಕೆ ಮಾಡಿದೆ. ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿಎ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕ್ಷೇತ್ರದಲ್ಲಿ ಕೈಗಾರಿಕೆ ಸ್ಥಾಪನೆ ಮೂಲಕ 35 ಸಾವಿರ ಕುಟುಂಬಗಳಲ್ಲಿ ಒಬ್ಬರಿಗೆ ಉದ್ಯೋಗ ಕಲ್ಪಿಸಲಾಗುತ್ತಿದೆ. ಈಗಾಗಲೇ ಕೋಲಾರ ಜಿಲ್ಲೆಯ ವೇಮಗಲ್, ನರಸಾಪುರದ ಬಳಿ ಸ್ಥಾಪನೆ ಮಾಡಿರುವ ಕೈಗಾರಿಕೆಗಳಲ್ಲಿ ಲಕ್ಷಾಂತರ ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ನಂತರ ಉದ್ಯೋಗ ಮೇಳ ನಡೆಸುವ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗಾವ ದೊರಕಿಸಿ ಕೊಡಲಾಗುವುದು ಎಂದು ಹೇಳಿದರು.

ದೇಶದಲ್ಲೆ ಪ್ರಥಮ ಬಾರಿಗೆ ಪಂಚ ಗ್ಯಾರಂಟಿಯನ್ನು ಕೊಟ್ಟ ಮಾತಿನಂತೆ ಅನುಷ್ಠಾನ ತಂದಿರುವ ಸರ್ಕಾರ ನಮ್ಮದು. ದೇವನಹಳ್ಳಿ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಪ್ರತ್ಯೇಕ ಯೋಜನೆ ಸಿದ್ಧಪಡಿಸಿಕೊಳ್ಳಲಾಗಿದೆ. ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ರಾಮಚಂದ್ರಪ್ಪ, ಪ್ರಸನ್ನಕುಮಾರ್, ಬಯಪ ಅಧ್ಯಕ್ಷ ಶಾಂತಕುಮಾರ್, ಕೆಪಿಸಿಸಿ ಸದಸ್ಯ ಚಿನ್ನಪ್ಪ, ದೊಡ್ಡಸಾಗರಹಳ್ಳಿ ಶ್ರೀನಿವಾಸ್, ಎಸ್.ಆರ್.ರವಿಕುಮಾರ್, ಎಸ್.ಪಿ.ಮುನಿರಾಜು, ನಾಗೇಗೌಡ, ಚೌಡಪ್ಪನಹಳ್ಳಿ ಲೋಕೇಶ್, ನಾರಾಯಣಸ್ವಾಮಿ, ಸಜ್ಜದ್, ಕೃಷ್ಣಮೂರ್ತಿ, ಮುದುಗುರ್ಕಿ ಆಂಜಿನಪ್ಪ, ಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯ ಮಾರಪ್ಪ, ಬುಡತಪ್ಪ, ಭಟ್ರೇನಹಳ್ಳಿ ನಾರಾಯಣಪ್ಪ, ಹೊಸಹಳ್ಳಿ ಮುನೇಗೌಡ, ಗೋಣೂರು ವೆಂಕಟಸ್ವಾಮಿ, ಗಿರೀಶ್, ಮೋಹನ್ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT