ಗುರುವಾರ , ಸೆಪ್ಟೆಂಬರ್ 23, 2021
28 °C

ದುಬೈಗೆ ರಕ್ತಚಂದನ ಸಾಗಣೆ ಯತ್ನ: ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈಗೆ ಸಾಗಣೆ ಮಾಡಲು ಯತ್ನಿಸಿದ್ದ ₹6ಕೋಟಿ ಬೆಲೆ ಬಾಳುವ ರಕ್ತಚಂದನವನ್ನು ಕೆಲವು ಪೈಪ್‌ಗಳಲ್ಲಿ ಪಾರ್ಸೆಲ್ ಮಾಡಿ ಕಳುಹಿಸುತ್ತಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ, ಪರಿಶೀಲನಾ ಸಮಯದಲ್ಲಿ ವಶಪಡಿಸಿಕೊಂಡಿದ್ದಾರೆ.

ರಕ್ತಚಂದನವನ್ನು ಪೈಪ್‌ಗಳಲ್ಲಿ ಪಾರ್ಸೆಲ್ ಮಾಡಿ ದುಬೈಗೆ ಸಾಗಿಸಲು ಹುನ್ನಾರ ನಡೆಸಿದ್ದರು.ಅಕ್ರಮವಾಗಿ ನಿಷೇಧಿತ ರಕ್ತಚಂದನ ರವಾನೆ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.