ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ-ಸಿಗರೇಟ್ ಅಕ್ರಮ ಸಾಗಣೆ: ಬಂಧನ

Last Updated 30 ನವೆಂಬರ್ 2022, 5:15 IST
ಅಕ್ಷರ ಗಾತ್ರ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಅಕ್ರಮವಾಗಿ ಇ-ಸಿಗರೇಟ್ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬೆಂಗಳೂರಿನ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು ₹ 41.58 ಲಕ್ಷ ಮೌಲ್ಯದ ಇ-ಸಿಗರೇಟ್ ಜಪ್ತಿ ಮಾಡಲಾಗಿದೆ. ನ. 25ರಂದು ದುಬೈನಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದ ಇಬ್ಬರು ಪ್ರಯಾಣಿಕರನ್ನು ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಪಾಸಣೆ ಮಾಡಿದಾಗ ಅಕ್ರಮವಾಗಿ ಇ-ಸಿಗರೇಟ್‌ಸಾಗಿಸುತ್ತಿರುವುದು ಬೆಳಕಿಗೆ
ಬಂದಿದೆ.

ಆರೋಪಿಗಳ ವಿರುದ್ಧ ಕಸ್ಟಮ್ಸ್‌ ಆ್ಯಕ್ಟ್ 1962ರ ಅಡಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT