ಶನಿವಾರ, ಫೆಬ್ರವರಿ 29, 2020
19 °C

ಜಾನಪದ ಕಲೆಯನ್ನು ಉಳಿಸುವುದು ನಮ್ಮ ಕರ್ತವ್ಯ: ಶಾಸಕ ಅರವಿಂದ ನಿಂಬಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ಧರ್ಮ ಮತ್ತು ಸಂಸ್ಕೃತಿಗಳು ಉತ್ತಮ ಸಮಾಜ ರೂಪಿಸುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ಅವರು ನಗರದ ಹೊರವಲಯದಲ್ಲಿರುವ ನಿಂಬೇಕಾಯಿಪುರದ ಶ್ರೀಆಂಜನೇಯ ದೇವಾಲಯದ ಆವರಣದಲ್ಲಿ ಆಧುನಿಕ ತಂತ್ರಜ್ಞಾನದಲ್ಲಿ ನಿರ್ಮಾಣವಾಗುತ್ತಿರುವ ರಂಗ ಮಂದಿರದ ಮಹಾದ್ವಾರ, ನೂತನ ಜನರೇಟರ್, ಹಾಗೂ ಜನಪದರು ನೂತನ ವೆಬ್‌ಸೈಟ್‌ ಮತ್ತು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಸ್ ತಂಗುದಾಣ ಉದ್ಘಾಟಿಸಿ ಮಾತನಾಡಿದರು.

‘ನಮ್ಮ ಪೂರ್ವಜರು ಆಚರಿಸಿಕೊಂಡು ಬಂದಿದ್ದ ಸಂಪ್ರದಾಯಗಳನ್ನು ಇಂದು ನಾವು ಮರೆತಿದ್ದೇವೆ, ಆದರೆ ವಿದೇಶಿಯರು ಅದನ್ನು ತಮ್ಮ ಜೀವನದಲ್ಲಿ ಅತ್ಯುತ್ತಮವಾಗಿ ಪಾಲನೆ ಮಾಡುತ್ತಿದ್ದಾರೆ’ ಎಂದರು.

‘ನಾವು ಪೋಷಕರು ನಮ್ಮ ಮಕ್ಕಳಿಗೆ ನಮ್ಮ ಜಾನಪದ ಕಲೆಯನ್ನು ಕಲಿಸಬೇಕಾಗಿದ್ದು ಇಂದಿನ ಯುಗದಲ್ಲಿ ಅದು ಮಾಯವಾಗುತ್ತಿದೆ. ಮಕ್ಕಳಿಗೆ ಟಿವಿ, ಮೊಬೈಲ್ ಕೊಡದೆ ನಮ್ಮ ಕಲೆ ಸಂಸ್ಕೃತಿಗಳನ್ನು ಕಲಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸವನ್ನು ನಾವೇ ಮಾಡಬೇಕಾಗಿದೆ’ ಎಂದರು.

ಜನಪದರು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಪಾಪಣ್ಣ ಮಾತನಾಡಿ, ‘ಈ ಸ್ಥಳದಲ್ಲಿ ರಂಗ ಮಂದಿರ ಆರಂಬಿಸಿದಾಗ ಹಲವಾರು ಜನ ಈ ಸ್ಥಳದಲ್ಲಿ ಜನರು ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು. ಆದರೆ ಈಗ ಕಳೆದ ಒಂದು ವರ್ಷದಿಂದ ಪ್ರತಿ ತಿಂಗಳ ಎರಡನೇ ಶನಿವಾರ ನಡೆಯುವ ನಾಟಕ ಪ್ರದರ್ಶನಕ್ಕೆ ಸಾವಿರಾರು ಜನ ಬರತ್ತಾರೆ. ಕಲಾ ಆಸಕ್ತರು, ನಾಟಕವನ್ನು ಪೋಷಿಸುವವರು ಪ್ರತಿ ತಿಂಗಳೂ ತಪ್ಪದೆ ಬರುತ್ತಿರುವುದು ಸಂತೋಷ ತಂದಿದೆ’ ಎಂದರು.

ಕಾರ್ಯಕ್ರಮದಲ್ಲಿ ಮಂಡೂರು ಗ್ರಾಮ ಪಂಚಾಯತಿ ಅಧ್ಯಕ್ಷ ವೇಣು, ತಾಲ್ಲೂಕು ಪಂಚಾಯಿತಿ ಸದಸ್ಯ ಮಂಜುನಾಥ್, ವೀಣಾ ರಮೇಶ್, ವೇದಿಕೆ ಸಂಚಾಲಕ ಜಗದೇಶ್ ಕೆಂಗನಾಳ್, ಪ್ರಧಾನ ಕಾರ್ಯದರ್ಶಿ ಸಿದ್ದೇಶ್ವರ ದೊಡ್ಡಬನಹಳ್ಳಿ, ಸುರೇಶ್‌ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)