ಶುಕ್ರವಾರ, ಏಪ್ರಿಲ್ 23, 2021
22 °C

ಸಹಕಾರ ಸಂಘದ ಮಳಿಗೆ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ‘ಸಹಕಾರ ಕ್ಷೇತ್ರ ಸೇವಾ ಮನೋಭಾವನೆಯ ಕ್ಷೇತ್ರವಾಗಬೇಕು. ಈ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುವಂತಾಗಬೇಕು. ಸರ್ಕಾರದಿಂದ ದೊರೆಯುವ ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು’ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.

ಅವರು ಪಟ್ಟಣದಲ್ಲಿ ಆನೇಕಲ್‌ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಶಾಸಕ ಬಿ.ಶಿವಣ್ಣ ಮಾತನಾಡಿ, ‘ಆನೇಕಲ್‌ ಪಟ್ಟಣದಲ್ಲಿ ಅತ್ಯಂತ ಹಳೆಯದಾದ ವ್ಯವಸಾಯ ಸೇವಾ ಸಹಕಾರ ಸಂಘ ಇದಾಗಿದ್ದು ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡಿದವರಿಗೆ ಮುಂದಿನ ರಾಜಕೀಯ ಹೆಜ್ಜೆಯಾಗಿದೆ. ಹಾಗಾಗಿ ಇಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದರೆ ಅವಕಾಶದ ಬಾಗಿಲುಗಳು ತೆರೆದುಕೊಳ್ಳುತ್ತದೆ’ ಎಂದರು.

ಬಮೂಲ್‌ ನಿರ್ದೇಶಕ ಬಿ.ಜಿ.ಆಂಜಿನಪ್ಪ ಮಾತನಾಡಿ, ‘5 ಎಕರೆ ಜಮೀ ನನ್ನು ಸರ್ಕಾರದಿಂದ ಮಂಜೂರು ಮಾಡಿಸಿ ಕೊಂಡು ಶೀತಲ ಕೇಂದ್ರವನ್ನು ಸ್ಥಾಪಿಸಲು ಪ್ರಯತ್ನ ಮಾಡಲಾಗುವುದು’ ಎಂದರು.

ಆನೇಕಲ್‌ ತಾಲ್ಲೂಕು ಟಿಎಪಿಸಿ ಎಂಎಸ್‌ ಅಧ್ಯಕ್ಷ ಮಂಜುನಾಥರೆಡ್ಡಿ ಮಾತನಾಡಿ. ಸಂಘದ ವತಿಯಿಂದ 5 ಅಂಗಡಿ ಮಳಿಗೆಗಳು, ಸಭಾಂಗಣ ನಿರ್ಮಿಸಲಾಗಿದೆ. ಮಾಸಿಕ ಆದಾಯ ₹1 ಲಕ್ಷ ಬರುವಂತೆ ಮಾಡಲಾಗಿದೆ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಸಂಪತ್, ಕರ್ಪೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮಶೇಖರರೆಡ್ಡಿ, ಮುಖಂಡರಾದ ಕೆ.ಎಸ್.ನಟರಾಜ್‌, ಎನ್.ಬಿ.ಐ. ನಾಗರಾಜು, ಆರ್‌.ಕೆ. ರಮೇಶ್, ಸಿ.ಕೆ.ಚಿನ್ನಪ್ಪ, ಬಳ್ಳೂರು ಮುನಿವೀರಪ್ಪ, ಹಾ.ವೇ.ವೆಂಕಟೇಶ್, ಜಿ.ನಂಜುಂಡಪ್ಪ, ಹೇಮಲತಾ ಆಂಜಿನಪ್ಪ, ಎಂ.ಕೃಷ್ಣಪ್ಪ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.