ಶುಕ್ರವಾರ, ಫೆಬ್ರವರಿ 28, 2020
19 °C

ಆನೇಕಲ್‌ನೊಂದಿಗೆ ಅವಿನಾಭಾವ ಸಂಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್ : ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಆನೇಕಲ್‌ನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಹಲವಾರು ಶಿಷ್ಯರ ಮನೆಗೆ ಭೇಟಿ ನೀಡುತ್ತಿದ್ದ ಗುರುಗಳು ಆನೇಕಲ್‌ ತಾಲ್ಲೂಕಿನ ವಿವಿಧ ದೇವಾಲಯಗಳ ಉದ್ಘಾಟನೆಯನ್ನು ನೆರವೇರಿಸಿದ್ದಾರೆ.

ಕರಕಲಘಟ್ಟದ ಕೆ.ವಿ.ಲಕ್ಷ್ಮೀನಾರಾಯಣಾಚಾರ್ಯ ಅವರು ಶ್ರೀಗಳ ಆಪ್ತ ಶಿಷ್ಯರಾಗಿದ್ದರು. ಅವರ ಮನೆಗೆ ಶ್ರೀಗಳು ಆಗಮಿಸಿ ಸಂಸ್ಥಾನ ಪೂಜೆ, ಪಾದಪೂಜೆಯನ್ನು ಸ್ವೀಕರಿಸುತ್ತಿದ್ದರು.

ಅತ್ತಿಬೆಲೆಯ ಲಕ್ಷ್ಮೀಕುಂಟೆ ಆಂಜನೇಯ ಸ್ವಾಮಿ ದೇವಾಲಯ, ತಿಮ್ಮರಾಯಸ್ವಾಮಿ ದೇವಾಲಯ, ವೇಣುಗೋಪಾಲ ದೇವಾಲಯ, ಮಾಯಸಂದ್ರ ಆಂಜನೇಯ ಸ್ವಾಮಿ ದೇವಾಲಯ, ಕರಕಲಘಟ್ಟ ಆಂಜನೇಯ ಸ್ವಾಮಿ ದೇವಾಲಯ, ಚಿಕ್ಕಹೊಸಹಳ್ಳಿ ಮಹದೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳ ಉದ್ಘಾಟನೆಯಲ್ಲಿ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು.

ಪಂಚಮ ಪರ್ಯಾಯದ ಅಂಗವಾಗಿ ಆನೇಕಲ್‌ ತಾಲ್ಲೂಕಿನ ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯ ದಲಿತ ಕೇರಿಯಲ್ಲಿ ಪಾದಯಾತ್ರೆ ನಡೆಸಿ ಜನರಲ್ಲಿ ಸಮಾನತೆಯನ್ನು ಸಾರಿದ್ದರು. ಧಾರ್ಮಿಕ ಭಾವನೆಗಳು ಬೆಳೆಯಲು ಆಧ್ಯಾತ್ಮಿಕ ಶಕ್ತಿ ನೀಡಿದ್ದರು.

ತಾಲ್ಲೂಕಿನ ಇಗ್ಗಲೂರು ಬಳಿ ಕಸಾಯಿಖಾನೆ ಸ್ಥಾಪನೆ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದ್ದ ಸಂದರ್ಭದಲ್ಲಿ ಪೇಜಾವರ ಶ್ರೀಗಳು ಅದನ್ನು ತಡೆಯಲು ನಡೆಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಹಲವಾರು ಭಕ್ತರ ಮನೆಗೆ ಭೇಟಿ ನೀಡಿ ಪಾದಪೂಜೆ ಸ್ವೀಕರಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು